ನವದೆಹಲಿ : 'ಲವ್ ಜಿಹಾದ್', ಹಾಗೆಂದರೇನು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ಲವ್ ಜಿಹಾದ್ ಬಗ್ಗೆ ಪ್ರಶ್ನಿಸಿದಾಗ ಹಾಗೆಂದರೇನು ಎಂದು ನನಗೆ ತಿಳಿದಿಲ್ಲ, ಲವ್ ಜಿಹಾದ್ ಪದದ ಅರ್ಥವನ್ನು ನೀವೇ ನನಗೆ ತಿಳಿಸಿ ಎಂದು ಹೇಳಿದ್ದಾರೆ.
ಲವ್ ಜಿಹಾದ್, ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ಹೆಚ್ಚು ಚರ್ಚೆಯಾಗುತ್ತಿರುವ ವಿಷಯವಾಗಿದೆ. ಲವ್ ಜಿಹಾದ್ ಬಗ್ಗೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಪ್ರಕರಣ ದಾಖಲಿಸಿದ ನಂತರ ರಾಜನಾಥ್ ಈ ಹೇಳಿಕೆ ನೀಡಿದ್ದಾರೆ.
ಲವ್ ಜಿಹಾದ್ ಪದದಿಂದ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗಷ್ಟೇ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಲವ್ ಜಿಹಾದ್ ವಿಷಯವನ್ನು ಪ್ರಮುಖವಾಗಿ ಪರಿಗಣಿಸಲು ನಿರ್ಧರಿಸಲಾಗಿತ್ತಾದರೂ ಈ ವಿಷಯದ ಬಗ್ಗೆ ಅಧಿಕೃತ ನಿರ್ಣಯ ಕೈಗೊಳ್ಳಲಾಗಿರಲಿಲ್ಲ. ಒಟ್ಟಾರೆ ರಾಜನಾಥ್ ಸಿಂಗ್ ಲವ್ ಜಿಹಾದ್ ಎಂದರೆ ಏನು ಅಂತ ಗೊತ್ತೇ ಇಲ್ಲ ಎಂದು ಹೇಳಿರುವ ಮೂಲಕ, ಟಿ.ವಿ ಮಾಧ್ಯಮದವರಿಗೆ ತೀವ್ರ ನಿರಾಸೆ ಮಾಡಿದ್ದಾರೆ.