Untitled Document
Sign Up | Login    
Dynamic website and Portals
  
September 12, 2014

ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆಗೆ ಮಹೂರ್ತ ಫಿಕ್ಸ್

ನವದೆಹಲಿ : 'ಕೇಂದ್ರ ಚುನಾವಣಾ ಆಯೋಗ' ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆಗೆ ನಡೆಯಲಿರುವ ಚುನಾವಣಾ ವೇಳಾಪಟ್ಟಿ ಘೋಷಿಸಿದೆ. ಅ.15ರಂದು ಎರಡೂ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ಸಂಪತ್ ಕುಮಾರ್ ಹೇಳಿದ್ದಾರೆ.

ಎರಡೂ ರಾಜ್ಯಗಳಲ್ಲಿ ಒಂದೇ ಹಂತದ ಮತದಾನ ನಡೆಸಲು ತೀರ್ಮಾನಿಸಲಾಗಿದೆ. ಸೆಪ್ಟೆಂಬರ್ 20ರಂದು ನಾಮಪತ್ರ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಅಂತೆಯೇ ಸೆಪ್ಟೆಂಬರ್ 27ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಕ್ಟೋಬರ್ 13ರಂದು ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅಕ್ಟೋಬರ್ 19ರಂದು ಎರಡೂ ರಾಜ್ಯಗಳಲ್ಲಿ ಮತಎಣಿಕೆ ಕಾರ್ಯ ನಡೆಸಲಾಗುತ್ತದೆ' ಎಂದು ಸಂಪತ್ ಕುಮಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಒಟ್ಟು 228 ಸ್ಥಾನಗಳಿದ್ದು, ರಾಜ್ಯದಲ್ಲಿ ಒಟ್ಟು 8.25 ಕೋಟಿ ಮತದಾರರಿದ್ದಾರೆ. ಮಹಾರಾಷ್ಟ್ರದಲ್ಲಿ ಒಟ್ಟು 90, 402 ಮತಗಟ್ಟೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಅಂತೆಯೇ ಹರ್ಯಾಣದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, 1.15 ಕೋಟಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಹರ್ಯಾಣದಲ್ಲಿ ಒಟ್ಟು 16, 244 ಮತಗಟ್ಟೆಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ' ಎಂದು ಸಂಪತ್ ಕುಮಾರ್ ತಿಳಿಸಿದ್ದಾರೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಅಲ್ಲಿನ ವಿಧಾನಸಭಾ ಚುನಾವಣೆಯನ್ನು ಮುಂದೂಡಲಾಗಿದೆ.

ಏತನ್ಮಧ್ಯೆ ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತಿದ್ದಾರೆ. ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಯುವರಾಜ್ ಸಿಂಗ್ ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited