ನವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಮನಮೋಹನ್ ಸರೀನ್ ನೇತೃತ್ವದಲ್ಲಿ ಸಮಿತಿ ರಚಿಸಿದೆ.
ಈ ಸಮಿತಿ ಗಡಿವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳು ಮತ್ತು ಕೇಂದ್ರ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರಗಳ ವಿಲೇವಾರಿ ಮಾಡಲಿದೆ.
ನಾಲ್ಕು ತಿಂಗಳಲ್ಲಿ ಪ್ರಮಾಣಪತ್ರಗಳ ಪರಾಮರ್ಶೆ ನಡೆಸುವಂತೆ ಈ ಸಮಿತಿಗೆ ಸೂಚಿಸಲಾಗಿದೆ.
ಗಡಿ ವಿವಾದಕ್ಕೆ ಸಂಬಂಧಿಸಿದಂತೆ 2006 ಮಾರ್ಚ್ 15ರಂದು ಬೆಳಗಾವಿ ನಗರ ಮತ್ತು ಸುತ್ತಮುತ್ತಲ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಕೋರಿ ಅಲ್ಲಿನ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಆಕ್ಷೇಪ ಸಲ್ಲಿಸಲು ಕರ್ನಾಟಕ ಮತ್ತು ಕೇಂದ್ರ ಸರ್ಕಾರಕ್ಕೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ.