Untitled Document
Sign Up | Login    
Dynamic website and Portals
  
September 13, 2014

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವೆಂದು ಘೋಷಿಸಿ: ಕತ್ತಿ ಆಗ್ರಹ

ಬೆಳಗಾವಿ : ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಶಾಸಕ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯ ವಿಭಜನೆಯ ಹೇಳಿಕೆ ನೀಡಿದ್ದಾರೆ.

ಈ ಹಿಂದೆ ಪ್ರತ್ಯೇಕ ರಾಜ್ಯದ ಮಾತುಗಳನ್ನಾಡಿ ತೀವ್ರ ವಿವಾದಕ್ಕೆ ಕಾರಣರಾಗಿದ್ದ ಉಮೇಶ್ ಕತ್ತಿ ಮತ್ತದೇ ಹಳೆರಾಗ ಹಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.

ಎಲ್ಲಾ ಸರ್ಕಾರಗಳೂ ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷಿಸುತ್ತಿದೆ. ಅತಿವೃಷ್ಟಿಯಿಂದಾಗಿ ಈ ಭಾಗದ ಜನತೆ ತತ್ತರಿಸಿ ಹೋಗಿದ್ದಾರೆ. ರಾಜ್ಯ ಸರ್ಕಾರ ಸಮರ್ಪಕವಾದ ಪರಿಹಾರ ನೀಡದೇ ನಿರ್ಲಕ್ಷಿಸಿದೆ. ಈ ಭಾಗದ ಜನರ ನೋವಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಗುಡುಗಿದ್ದಾರೆ.

ಈ ಭಾಗದ ಜನತೆಯ ಹಿತಕ್ಕಾಗಿ ಹಾಗೂ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವ ಅಗತ್ಯವಿದೆ. ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು.

ಒಂದುವೇಳೆ ಪ್ರತ್ಯೇಕ ರಾಜ್ಯವನ್ನು ಘೋಷಿಸದಿದ್ದಲ್ಲಿ ಈ ಬಗ್ಗೆ ನಾವು ಪ್ರತ್ಯೇಕ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited