Untitled Document
Sign Up | Login    
Dynamic website and Portals
  
September 13, 2014

ಸಂಪುಟ ವಿಸ್ತರಣೆಗೆ ಆಸಕ್ತಿಯಿದೆ: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಿದ್ದರಾಮಯ್ಯ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಗೆ ತಮಗೆ ಆಸಕ್ತಿಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತಣೆ ಕುರಿತು ತಮಗೆ ಆಸಕ್ತಿಯಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂಪುಟ ಪುನರಚನೆ ಬಗ್ಗೆ ಅಭಿಪ್ರಾಯಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು.

ಸಂಪುಟದಲ್ಲಿ ಕೆಲ ಅಸಮರ್ಥ ಸಚಿವರಿದ್ದಾರೆ ಎಂಬ ಮಾಹಿತಿಯಿದೆ. ಹೀಗಾಗಿ ಸಮರ್ಥ ಸಚಿವರು ಯಾರೆಂಬುದರ ಬಗ್ಗೆ ಪರಮೇಶ್ವರ್ ಜತೆ ಚರ್ಚಿಸುತ್ತೇನೆ ಎಂದು ತಿಳಿಸಿದರು.

ನಿಗಮ ಮಂಡಳಿ ನೇಮಕಾತಿ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ. ಸೆ.15ರಂದು ಪರಮೇಶ್ವರ್ ಭೇಟಿಯಾಗಿ ಈ ಕುರಿತು ಸಮಾಲೋಚನೆ ನಡೆಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಮುಸ್ಲೀಂ ಸಂಘಟನೆ ನಿಷೇಧಿಸಲಿ ಎಂಬ ಸಂಸದೆ ಶೋಭಾ ಕರಾಂದ್ಲಾಜೆ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೋಮುವಾದಿಗಳು ಮಾತನಾಡುವುದೇ ಹೀಗೆ ಎಂದು ತಿರುಗೇಟು ನೀಡಿದರು.

ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಂತವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited