ಮೈಸೂರು : ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಬೆಳಗಾವಿ ವಿಭಜನೆ ಮಾಡುವ ಪ್ರಶ್ನೆಯೇ ಇಲ್ಲ, ಉಮೇಶ್ ಕತ್ತಿಯವರ ಇಂತಹ ಹೇಳಿಕೆ ಸರಿಯಲ್ಲ ಎಂದು ಕಿಡಿಕಾರಿದರು.
ಉಮೇಶ ಕತ್ತಿ ಹಿಂದೆ ಸಚಿವರಾಗಿದ್ದವರು, ಸಚಿವರಾದಂತವರು ಇಂತಹ ಹೇಳಿಕೆಗಳನ್ನು ನೀಡುವುದು ಸರಿಯಲ್ಲ, ಗಡಿ ವಿವಾದದಲ್ಲಿ ಮಹಾಜನ್ ವರದಿಯೇ ಅಂತಿಮ ಎಂದು ತಿಳಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾಗಿರುವ ಅತಿವೃಷ್ಟಿಯಿಂದಾಗಿ 426 ಕೋತಿ ನಷ್ಟ ಉಂಟಾಗಿದ್ದು, ಈ ಕುರಿತು ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ ಎಂದು ತಿಳಿಸಿದರು.