ಬೆಂಗಳೂರು : ಭದ್ರಾ ಮೇಲ್ದಂಡೆ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರೈತರು ಸಮಾಜ ಕಲ್ಯಾಣ ಸಚಿವ ಹೆಚ್.ಆಂಜನೇಯ ಅವರನ್ನು ಘೇರಾವ್ ಹಾಕಿದ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ನಡೆದ ಭದ್ರಾ ಮೇಲ್ದಂಡೆ ನೀರು ಹಕ್ಕೊತ್ತಾಯ ಸಮಾವೇಶದ ವೆಳೆ ಮಾತನಾಡಿದ ಸಚಿವ ಹೆಚ್.ಆಂಜನೇಯ, ಭದ್ರಾ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಬಜೆಟ್ ನಲ್ಲಿ ಹಣ ಮೀಸಲಿಡಲಾಗಿದೆ. ಆದರೆ ಯೋಜನೆ ಅನುಷ್ಠಾನಕ್ಕೆ ಕೆಲ ತಾಂತ್ರಿಕ ಸಮಸ್ಯೆಗಳಿವೆ. ಪರಿಸರ ಇಲಾಖೆ ಅನುಮತಿ ನೀಡಿದ ತಕ್ಷಣ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದರು.
ಇದರಿಂದ ಅಕ್ರೋಶಗೊಂಡ ರೈತರು, ಸಚಿವರ ವಿರುದ್ಧ ಧಿಕ್ಕಾರ ಕೂಗಿದರು. ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಸರ್ಕಾರಕ್ಕೆ ಇಚ್ಛಾಶಕ್ತಿ ಕೊರತೆಯಿದೆ. ಕೆಲವರ ಒತ್ತಡದಿದ್ದಾಂಗಿ ಸರ್ಕಾರ ಯೋಜನೆ ಅನುಷ್ಠಾನಗೊಳಿಸುತ್ತಿಲ್ಲ ಎಂದು ಕಿಡಿಕಾರಿದರು.
ಈ ವೇಳೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ, ಈ ತಿಂಗಳಾಂತ್ಯಕ್ಕೆ ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ನಡೆಸುವುದಾಗಿ ತಿಳಿಸಿದರು.