Untitled Document
Sign Up | Login    
Dynamic website and Portals
  
September 14, 2014

ಸಚಿವ ಸಂಪುಟ ವಿಚಾರ ಸಿಎಂ ವಿವೇಚನೆಗೆ ಬಿಟ್ಟದ್ದು: ಪರಮೇಶ್ವರ್

ಜಿ.ಪರಮೇಶ್ವರ್ ಜಿ.ಪರಮೇಶ್ವರ್

ತುಮಕೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಬೇಕೋ, ಅಥವಾ ಸಂಪುಟ ಪುನರಚನೆ ಮಾಡಬೇಕೋ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿವೇಚನೆಗೆ ಬಿಟ್ಟದ್ದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ಪುನರಚನೆ, ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ಕ್ರಿಮಿನಲ್ ಹಿನ್ನಲೆಯುಳ್ಳ ಹಾಗೂ ಅಸಮರ್ಥ ಸಚಿವರನ್ನು ಕೈಬಿಡುವ ವಿಚಾರದ ಬಗ್ಗೆಯೂ ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ. ಎಲ್ಲಾ ಬೆಳವಣಿಗೆಗಳ ಬಗ್ಗೆ ಅವರು ಗಮನಿಸುತ್ತಿದ್ದಾರೆ ಎಂದರು.

ಸಚಿವ ಸಂಪುಟ ವಿಚಾರವಾಗಿ ವಿಳಂಬವಾಗುತ್ತಿದೆ ಎಂಬ ಪ್ರಶ್ನೆಯಿಲ್ಲ, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಗೆ ರಹಸ್ಯ ಪತ್ರ ಬರೆದಿದ್ದಾರೆ ಎಂಬ ವಿಚಾರವಾಗಿ ಮಾತನಾಡಿದ ಅವರು, ಪಕ್ಷದಲ್ಲಿ ಹೈಕಮಾಂಡ್ ಗೆ ಪತ್ರ ಬರೆಯುವ ಸಂಸ್ಕೃತಿಯಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗಿದೆ ಎಂದು ಪರಮೇಶ್ವರ್ ಇದೇ ವೇಳೆ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited