ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸೆ.27ರಂದು ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಥ್ ಸಿಂಗ್ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ವಿಶ್ವಸಂಸ್ಥೆಯಲ್ಲಿ ಮೊದಲ ಬಾರಿಗೆ ಹಿಂದಿಯಲ್ಲೇ ಭಾಷಣ ಮಾಡಿದ್ದರು. ನಾನೂ ಕೂಡ ಸಚಿವನಾಗಿ ವಿಶ್ವಸಂಸ್ಥೆಯಲ್ಲಿ ಹಿಂದಿಯಲ್ಲಿ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ವಿದೇಶಿ ಗಣ್ಯರನ್ನು ಭೇಟಿ ಮಾಡಿದಾಗಲೂ ಹಿಂದಿಯಲ್ಲೇ ಸಂವಾದ ನಡೆಸುತ್ತಾರೆ. ದೇಶದಲ್ಲಿ ಶೇ.55ರಷ್ಟು ಮಂದಿ ಹಿಂದಿಯಲ್ಲಿ ಮಾತನಾಡುತ್ತಾರೆ. ಶೇ.90ರಷ್ಟು ಜನರು ಹಿಂದಿಯನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಅವರು ತಿಳಿಸಿದ್ದಾರೆ.