Untitled Document
Sign Up | Login    
Dynamic website and Portals
  
September 15, 2014

ಭಾರತದಲ್ಲಿ ಹೈಸ್ಪೀಡ್ ಟ್ರೇನ್ ಗೆ ಚೀನಾ ಬಂಡವಾಳ ಹೂಡಿಕೆ ಸಾಧ್ಯತೆ

ನವದೆಹಲಿ : ಭಾರತದಲ್ಲಿ ಹೈಸ್ಪೀಡ್ ರೈಲು ಸಂಚಾರ, ಮೂಲಸೌಕರ್ಯಗಳ ಬಗ್ಗೆ ಚೀನಾ ಆಸಕ್ತಿ ಹೊಂದಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾರತಕ್ಕೆ ಆಗಮಿಸಿದ ವೇಳೆ ಬಂಡವಾಳ ಹೂಡುವ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ.

ಮುಂಬೈ-ಅಹಮದಾಬಾದ್ ನಡುವೆ ದೇಶದ ಮೊದಲ ಬುಲೆಟ್ ರೈಲು ಓಡಿಸಲು ಜಪಾನ್ ನೆರವು ಘೋಷಿಸಿದ ಬೆನ್ನಲ್ಲೇ ಬೆಂಗಳೂರು-ಮುಂಬೈ, ಬೆಂಗಳೂರು-ಚೆನ್ನೈ ಹೈಸ್ಪೀಡು ರೈಲು ಸಂಚಾರದ ಬಗ್ಗೆ ಚೀನಾ ಉತ್ಸುಕವಾಗಿದೆ.

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಸೆ.17ರಂದು ಭಾರತಕ್ಕೆ ಆಘಮಿಸಲಿದ್ದು, ಈ ವೇಳೆ ಮುಂದಿನ 5 ವರ್ಷಗಳಲ್ಲಿ ರೈಲ್ವೆ ಆಧುನೀಕರಣ, ಹೆದ್ದಾರಿ, ಬಂದರು ನಿರ್ಮಾಣ, ವಿದ್ಯುತ್ ಉತ್ಪಾದನೆ ಮತ್ತು ಕೈಗಾರಿಕಾ ಪಾರ್ಕ್ ಸ್ಥಾಪನೆಗೆ 6 ಲಕ್ಷ ಕೋಟಿ ರೂ. ಬಂಡವಾಳ ಹೂಡುವ ಕುರಿತು ಘೋಷಣೆ ಮಾಡುವ ಸಾಧ್ಯತೆಯಿದೆ.

ಇದು ಭಾರತದಲ್ಲಿ ಜಪಾನ್ 2 ಲಕ್ಷ ಕೋಟಿ ರೂ ಬಂಡವಾಳ ಹೂಡುವ ಕುರಿತು ಮಾಡಿದ್ದ ಘೋಷಣೆಗಿಂತ ಹೆಚ್ಚಾಗಿದ್ದು, ಉಭಯ ದೇಶಗಳ ನಡುವೆಯೇ ಪೈಪೋಟಿಗೆ ಕಾರಣವಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited