Untitled Document
Sign Up | Login    
Dynamic website and Portals
  
September 17, 2014

ಹುಟ್ಟುಹಬ್ಬ ಹಿನ್ನಲೆ: ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಹುಟ್ಟುಹಬ್ಬ ಹಿನ್ನಲೆ: ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಅಹಮದಾಬಾದ್ : ತಮ್ಮ 64ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಗುಜರಾತ್ ನ ಗಾಂಧೀನಗರದಲ್ಲಿ ತಮ್ಮ ನಿವಾಸಕ್ಕೆ ತೆರಳಿದ ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಹೀರಾ ಬೆನ್ ಮೋದಿಯವರಿಗೆ ಸಿಹಿ ತಿನಿಸಿ ಶುಭಕೋರಿದರು.

ಜಮ್ಮು-ಕಾಶ್ಮೀರದಲ್ಲಿ ಉಂಟಾಗಿರುವ ಪ್ರವಾಹ ಹಿನ್ನಲೆಯಲ್ಲಿ ತಮ್ಮ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸದಂತೆ ಬೆಂಬಲಿಗರಿಗೆ ಮೋದಿ ಕರೆ ನೀಡಿದ್ದಾರೆ. ತಮ್ಮ ಹುಟ್ಟುಹಬ್ಬ ಆಚರಣೆಗೆ ವ್ಯಯಿಸುವ ಹಣವನ್ನು ಪ್ರವಾಹ ಸಂತ್ರಸ್ತರ ನೆರವಿಗೆ ನೀಡುವಂತೆ ಮನವಿ ಮಾಡಿದ್ದಾರೆ.

ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಅವರು ಜಮ್ಮು-ಕಾಶ್ಮೀರ ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗಾಗಿ 5001ರೂ.ನ್ನು ಮೋದಿಯವರಿಗೆ ನೀಡಿದ್ದಾರೆ.

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಅಂಗವಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವರು ಶುಭಹಾರೈಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited