Untitled Document
Sign Up | Login    
Dynamic website and Portals
  
September 17, 2014

ರಾಜ್ಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಬಿಜೆಪಿ ಕೋರ್ ಕಮಿಟಿ ತೀರ್ಮಾನ

ಕೇರಳದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇರಳದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಬೀದರ್ : 'ಸಿದ್ದರಾಮಯ್ಯ' ನೇತೃತ್ವದ ಕಾಂಗ್ರೆಸ್ ಸರ್ಕಾರದ ಭೂ ಹಗರಣಗಳ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸೆ.17ರಂದು ಬೀದರ್ ನ ಗೊರಟಾ ಗ್ರಾಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಸಂಘಟನೆ ಹಾಗೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ. ಇತ್ತೀಚೆಗಷ್ಟೇ ಸಿದ್ದರಾಮಯ್ಯ ಸರ್ಕಾರ ನಡೆಸಿರುವ ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದ ಸಂಬಂಧ ಸಿ.ಎಂ ವಿರುದ್ಧ ದೂರು ನೀಡಲು ಬಿಜೆಪಿ ನಿರ್ಧರಿಸಿತ್ತು.

ಕೋರ್ ಕಮಿಟಿ ಸಭೆಗೂ ಮುನ್ನ ಸರ್ದಾರ್ ಪಟೇಲ್ ಅವರ ಪುತ್ಥಳಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅಮಿತ್ ಶಾ, ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದ್ದಾರೆ. ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನದಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ಬಂದಿರಬಹುದು ಆದರೆ 4 ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅತ್ಯಂತ ಹೆಚ್ಚು ಸ್ಥಾನ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆಯೂ ಮಾತನಾಡಿದ ಅಮಿತ್ ಶಾ, ನರೇಂದ್ರ ಮೋದಿ ಜನರ ಮಧ್ಯೆ ಇರುವ ಪ್ರಧಾನಿಯಾಗಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ದಿನ ಗುಂಡು ನಿರೋಧಕ ಕವಚ ಇಲ್ಲದೇ ಭಾಷಣ ಮಾಡಿದ್ದಾರೆ. ದೇಶದ ಜನತೆಯನ್ನು ಆರ್ಥಿಕವಾಗಿ ಸದೃಢಗೊಳಿಸಲು ಜನ್-ಧನ್ ಯೋಜನೆಯನ್ನು ಮೋದಿ ಆರಂಭಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ್ದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ತಕ್ಷಣ ಕಾರ್ಯಪ್ರವೃತ್ತರಾದರು. ಅಲ್ಲದೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಬಾರದೆಂದು ಕರೆ ನೀಡಿದ್ದರು ಎಂದು ಅಮಿತ್ ಶಾ ಮೋದಿ ಗುಣಾಗಾನ ಮಾಡಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited