Untitled Document
Sign Up | Login    
Dynamic website and Portals
  
September 18, 2014

ರಾಜ್ಯಪಾಲ- ಯಡಿಯೂರಪ್ಪ ಭೇಟಿ, ಅರ್ಕಾವತಿ ಡಿನೋಟಿಫಿಕೇಶನ್ ಬಗ್ಗೆ ಚರ್ಚೆ

ಮಾಜಿ ಸಿ.ಎಂ ಯಡಿಯೂರಪ್ಪ ಮಾಜಿ ಸಿ.ಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯಪಾಲ ವಾಜುಭಾಯ್ ರೂಡಭಾಯ್ ವಾಲ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಭೇಟಿ ಮಾಡಿದ್ದಾರೆ.

ಸೆ.18ರಂದು ರಾಜಭವನಕ್ಕೆ ಭೇಟಿ ನೀಡಿರುವ ಯಡಿಯೂರಪ್ಪ, ರಾಜ್ಯಪಾಲರೊಂದಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನಡೆಸಿರುವ ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣ ಹಾಗೂ ರಾಜ್ಯ ರಾಜಕಾರಣದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಯಾವುದೇ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ. ಇದೊಂದು ಸೌಹಾರ್ದಯುತ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ.

ಸೆ.17ರಂದು ಬೀದರ್ ನಲ್ಲಿ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಅರ್ಕಾವತಿ ಡಿನೊಟಿಫಿಕೇಶನ್ ಹಗರಣ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲಾ ಜನವಿರೋಧಿ ನೀತಿಗಳ ವಿರುದ್ಧ ಹೋರಾಟವನ್ನು ತೀವ್ರಗೊಳಿಸುವ ಮೂಲಕ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯ ಬಿಜೆಪಿ ಮುಖಂಡರಿಗೆ ಸೂಚಿಸಿದ್ದರು.

ರಾಜ್ಯ ಸರ್ಕಾರದ ವಿರುದ್ಧ ಸರಣಿ ಹೋರಾಟಗಳನ್ನು ಹಮ್ಮಿಕೊಳ್ಳಿ. ಹೋರಾಟ ತೀಕ್ಷ್ಣಗೊಳಿಸಿ ಕಾಂಗ್ರೆಸ್ ತಪ್ಪುಗಳನ್ನು ಜನತೆ ಮುಂದಿಟ್ಟು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಿ. ಈ ಮೂಲಕ ಪಕ್ಷವನ್ನು ಸಂಘಟಿಸಿ ಎಂದು ಕರೆ ನೀಡಿದ್ದರು. ರಾಷ್ಟ್ರಾಧ್ಯಕ್ಷರ ಅಣತಿಯಂತೆ ರಾಜ್ಯ ಬಿಜೆಪಿ ಘಟಕದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸುವ ಸಂಬಂಧ ರೂಪುರೇಷೆ ಸಿದ್ಧಗೊಳ್ಳುತ್ತಿದೆ. ಇದೇ ವೇಳೆ ರಾಷ್ಟ್ರೀಯ ಉಪಾಧ್ಯಕ್ಷ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited