Untitled Document
Sign Up | Login    
Dynamic website and Portals
  
September 20, 2014

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಮೋದಿ ಮಾದರಿ ಅನುಸರಿಸಲಿರುವ ಎಬಿವಿಪಿ

ನವದೆಹಲಿ : ಕಳೆದ ವಾರ ಜವಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿ ಚುನಾವಣೆಯಲ್ಲಿ 4ಸ್ಥಾನಗಳನ್ನು ಗೆದ್ದಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆ ಇದೀಗ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಲು ಮೋದಿ ಮಾದರಿ ಅನುಸರಿಸಲು ನಿರ್ಧರಿಸಿದೆ.

ದೆಹಲಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ತಿಳಿಸುವುದಕ್ಕಾಗಿ ಹಾಗೂ ಸಲಹೆ ನೀಡುವುದಕ್ಕಾಗಿಯೇ ಒಂದು ಪ್ರತ್ಯೇಕ ಪೆಟ್ಟಿ(suggestion box)ಯನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅನುಸರಿಸುತ್ತಿರುವ ಕಾಲಮಿತಿಯೊಳಗೆ ಸಮಸ್ಯೆಗಳನ್ನು ಬಗೆಹರಿಸಬೇಕೆಂಬ ಮಂತ್ರವನ್ನು ಪಾಲಿಸಲು ಎಬಿವಿಪಿ ಮುಂದಾಗಿದೆ. ಇಷ್ಟೇ ಅಲ್ಲದೇ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸಿರುವುದಕ್ಕೆ ನಿಖರ ಅಂಕಿ ಅಂಶಗಳನ್ನು ನಿರ್ವಹಿಸಲು ಎಬಿವಿಪಿ ನಿರ್ಧರಿಸಿದೆ.

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಅವರ ಸಮಸ್ಯೆಗಳನ್ನು ಬಗೆಹರಿಸುವುದೇ ನಮ್ಮ ಗುರಿ ಎಂದು ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಮೋತಿ ನಗರ್ ತಿಳಿಸಿದ್ದಾರೆ. ಒಟ್ಟಾರೆ ವಿದ್ಯಾರ್ಥಿಗಳ ಮೇಲೂ ಮೋದಿ ಮಾದರಿ ಪರಿಣಾಮ ಬೀರಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited