Untitled Document
Sign Up | Login    
Dynamic website and Portals
  
September 21, 2014

ಅಕ್ರಮ ಗಣಿಗಾರಿಕೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ನೋಟಿಸ್

ಬೆಂಗಳೂರು : ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ.

ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು 38 ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಡಿಸಿಪಿಗಳಾದ ಅಬ್ದುಲ್ ಸತ್ತಾವರ್, ಸಿಪಿಐಗಳಾದ ಎಸ್ ಎಸ್ ಹುಲ್ಲೂರ್, ಬಾಲಾಜಿ ಸಿಂಗ್, ಪಿಎಸ್ ಐ ಗಳಾದ ಉಮೇಶ್, ಮಂಜುನಾಥ್ ಸೇರಿದಂತೆ 38 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಈ ಎಲ್ಲಾ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ ಆರೋಪ ಸಾಬೀತಾದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೂ ಸೂಚಿಸಲಾಗಿದೆ.

ಅಕ್ರಮ ಗಣಿಗಾರಿಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾ.ಸಂತೋಷ್ ಹೆಗ್ಡೆ ನೀಡಿದ್ದ ವರದಿಯಲ್ಲಿ ಒಟ್ಟು 52 ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ವರದಿಯನ್ನಾಧರಿಸಿ ಲೋಕಾಯುಕ್ತ ವಿಶೇಷ ತನಿಖಾ ತಂಡ 38 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited