ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಸೀಟು ಹಂಚಿಕೆ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆಯಾದರೂ ಬಿಜೆಪಿ ಹಾಗೂ ಶಿವಸೇನೆ ಎರಡೂ ಪಕ್ಷಗಳು ಕೊಂಚ ತಮ್ಮ ಪಟ್ಟು ಸಡಿಲಿಸಿವೆ.
ಬಿಜೆಪಿ ಮೊದಲಿನ 135 ಸ್ಥಾನದ ಪಟ್ಟು ಸಡಿಲಿಸಿ 130 ಸ್ಥಾನಕ್ಕೆ ಬೇಡಿಕೆಯಿಟ್ಟಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಜತೆ ಮಾತುಕತೆ ಮಾತುಕತೆ ನಡೆಸಿದ್ದು, ಶಿವಸೇನೆ ನಿರಂತರವಾಗಿ ಸೋತಿರುವ ಕ್ಷೇತ್ರಗಳನ್ನು ತಮಗೆ ಬಿಟ್ಟುಕೊಡುವಂತೆ ಬೇಡಿಕೆಯಿಟ್ಟಿದ್ದಾರೆ. ಈ ವೇಳೆ ಶಿವಸೇನೆ 126 ಸ್ಥಾನಗಳನ್ನು ಬಿಟ್ಟುಕೊಡಲು ಸಮ್ಮತಿಸಿದೆ ಎಂದು ತಿಳಿದುಬಂದಿದೆ.
ಇದೇ ವೇಳೆ ಕಾಂಗ್ರೆಸ್ ಹಾಗೂ ಎನ್ ಸಿಪಿ ಕೂಟದ ಸೀಟು ಹಂಚಿಕೆ ಮಹತ್ವದ ಸಭೆ ಸೆ.23ರಂದು ನಡೆಯಲಿದೆ. ಎನ್ ಸಿಪಿ 144 ಸ್ಥಾನಕ್ಕೆ ಬೇಡಿಕೆಯಿಟ್ಟರೂ, ಕಾಂಗ್ರೆಸ್ 124 ಕ್ಷೇತ್ರಗಳನ್ನು ನೀಡುವುದಾಗಿ ಕಾಂಗ್ರೆಸ್ ಹೇಳುತ್ತಿತ್ತು. ಆದರೆ ಈಗ ಕಾಂಗ್ರೆಸ್ ಕೂಡ ಕೊಂಚ ಮೃದುವಾಗಿದ್ದು, 130 ಸ್ಥಾನ ನೀಡಲು ಮುಂದಾಗಿದೆ ಎನ್ನಲಾಗಿದೆ.