Untitled Document
Sign Up | Login    
Dynamic website and Portals
  
September 23, 2014

ಬಿಜೆಪಿ-ಶಿವಸೇನೆ ನಡುವೆ ಬಗೆಹರಿದ ಸೀಟು ಹಂಚಿಕೆ ಬಿಕ್ಕಟ್ಟು

ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಬಿಕ್ಕಟ್ಟು ಕೊನೆಗೂ ಬಗೆಹರಿದಿದೆ. ಉಭಯ ಪಕ್ಷಗಳ ನಾಯಕರು ನಡೆಸಿದ ಮಾತುಕತೆ ಸಫಲವಾಗಿದೆ.

ಬಿಜೆಪಿ-ಶಿವಸೇನೆ ನಾಯಕರ ನಡುವೆ ನಡೆದ ಮಹತ್ವದ ಮಾತುಕತೆಯಲ್ಲಿ ಮೈತ್ರಿ ಮುಂದುವರೆಸಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ.

288 ವಿಧಾನಸಭಾ ಕ್ಷೇತ್ರಗಳಲ್ಲಿ ಶಿವಸೇನೆ 151 ಸ್ಥಾನಗಳಲ್ಲಿ ಶಿವಸೇನೆ ಸ್ಪರ್ಧಿಸಲಿದೆ. 130 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಉಳಿದ 7 ಕ್ಷೇತ್ರಗಳನ್ನು ಮಿತ್ರಪಕ್ಷಗಳಾದ ಆರ್.ಪಿ.ಸಿ, ಆರ್.ಎಸ್.ಪಿ, ಸ್ವಾಭಿಮಾನಿ ಸಂಘಟನಾ ಪಕ್ಷಗಳಿಗೆ ಬಿಟ್ಟುಕೊಡಲಾಗಿದೆ.

ಒಟ್ಟಿನಲ್ಲಿ ಕಳೆದ ಒಂದು ವಾರಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಗೊಂದಲ ಕೊನೆಗೂ ಇತ್ಯರ್ಥವಾಗಿದ್ದು, ಸಂಜೆವೇಳೆ ಉಭಯ ನಾಯಕರು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited