Untitled Document
Sign Up | Login    
Dynamic website and Portals
  
September 25, 2014

ಅಮೆರಿಕಾ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ

ಅಮೆರಿಕಾ ಪ್ರವಾಸಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ 5 ದಿನಗಳ ಅಮೆರಿಕಾ ಪ್ರವಾಸಕ್ಕೆ ತೆರಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಸಂಜೆ ನಾಲ್ಕು ಗಂಟೆ ಸುಮಾರಿಗೆ ಪ್ರಧಾನಿ ಮೋದಿ ತಮ್ಮ ಪ್ರವಾಸ ಆರಂಭಿಸಿದ್ದಾರೆ. ಐದು ದಿನಗಳ ತಮ್ಮ ಪ್ರವಾಸದಲ್ಲಿ ಮೋದಿ ಮೊದಲು ವಿಶ್ವ ಸಂಸ್ಥೆಯ ಮಹಾಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ವಾಷಿಂಗ್ಟನ್ ಗೆ ತೆರಳಿ ಅಲ್ಲಿ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಭೇಟಿಯಾಗಲಿದ್ದಾರೆ.

ಅಮೆರಿಕದಲ್ಲಿರುವ 100 ಗಂಟೆಗಳ ಅವಧಿಯಲ್ಲಿ ಪ್ರಧಾನಿ ಮೋದಿ 50ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿಯಾದ ಬಳಿಕ ಮೊದಲ ಭಾರಿಗೆ ಮೋದಿ ಕೈಗೊಳುತ್ತಿರುವ ಅಮೆರಿಕ ಪ್ರವಾಸ ವಿಶ್ವದ ಗಮನ ಸೆಳೆದಿದೆ. ಸೆ.29ರಂದು ವಾಷಿಂಗ್ಟನ್ ನಲ್ಲಿ ಅಧ್ಯಕ್ಷ ಬರಾಕ್ ಒಬಾಮ ರನ್ನು ಭೇಟಿಯಾಗಲಿದ್ದಾರೆ. ಮೋದಿಯವರ ಅಮೆರಿಕ ಭೇಟಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಇನ್ನಷ್ಟು ವೃದ್ಧಿಗೊಳಿಸಲಿದೆ.

13 ವರ್ಷಗಳ ಬಳಿಕ ನರೇಂದ್ರ ಮೋದಿ ಅಮೆರಿಕಾಗೆ ಭೇಟಿ ನೀಡುತ್ತಿದ್ದು, ಅಮೆರಿಕದ ಉದ್ಯಮಿಗಳು, ವಿವಿಧ ಕಂಪನಿಗಳ ಜತೆ ಚರ್ಚೆ ನಡೆಸಿ, ಭಾರತದಲ್ಲಿ ಬಂಡವಾಳ ಹೂಡಿಕೆಗೆ ಆಹ್ವಾನ ನೀಡಲಿದ್ದಾರೆ. ಅಲ್ಲದೇ, ಸ್ಮಾರ್ಟ್ ಸಿಟಿ ನಿರ್ಮಾಣ ಕುರಿತು ಚರ್ಚೆ ನಡೆಸಲಿದ್ದಾರೆ.

ಈ ಎಲ್ಲ ಕಾರ್ಯಕ್ರಮಗಳ ಮಧ್ಯೆ, ಅನಿವಾಸಿ ಭಾರತೀಯರು ನ್ಯೂಯಾರ್ಕ್ ನ ಮ್ಯಾಡಿಸನ್ ಗಾರ್ಡನ್ ಕ್ರೀಡಾಂಗಣದಲ್ಲಿ ಏರ್ಪಡಿಸುತ್ತಿರುವ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಸುಮಾರು 20,000 ಭಾರತೀಯ ಮೂಲದ ನಿವಾಸಿಗಳನ್ನುದ್ದೇಶಿಸಿ ಭಾಷಣಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಸೀಟುಗಳು ಈಗಾಗಲೇ ತುಂಬಿದ್ದು, ಅಮೆರಿಕದಲ್ಲಿ ವಿಶ್ವದ ಯಾವುದೇ ನಾಯಕನಿಗೂ ಇಷ್ಟೊಂದು ಬೃಹತ್ ಪ್ರಮಾಣದ ಸ್ವಾಗತ ಈವರೆಗೆ ದೊರಕದಿದ್ದು, ಇದೊಂದು ದಾಖಲೆಯಾಗಿದೆ.

ಅಮೆರಿಕಾ ಪ್ರವಾಸ ಅರಾಭಿಸುವುದಕ್ಕೂ ಮೊದಲು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಸೆ.26ರಿಂದ 30ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದ್ದು, ನ್ಯೂಯಾರ್ಕ್ ನಲ್ಲಿ ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ. ಬಳಿಕ ಸೆ.29 ಮತ್ತು 30ರಂದು ವಾಷಿಂಗ್ಟನ್ ನಲ್ಲಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ವಿಶ್ವಸಂಸ್ಥೆಯ 69ನೇ ಮಹಾಧಿವೇಶನ ಅಂತರಾಷ್ಟ್ರೀಯ ಸಮುದಾಯಕ್ಕೆ ಹಲವಾರು ಸವಾಲಿನ ಕ್ಷಣವಾಗಿದೆ. ಆರ್ಥಿಕ ಅಭಿವೃದ್ಧಿ, ಭದ್ರತೆ, ಭಯೋತ್ಪಾದನೆ, ಆಫ್ರಿಕಾದಲ್ಲಿ ಎಬೊಲ ರೋಗದಿಂದ ಉಂಟಾಗಿರುವ ಆರೋಗ್ಯ ಬಿಕ್ಕಟ್ಟು, ಬಡತ ನಿರ್ಮೂಲನೆ ವಿಚಾರ ಸೇರಿದಂತೆ ಹಲವು ಜಾಗತಿಕ ಸವಾಲಿನಿಂದ ಕೂಡಿದೆ.

ಪ್ರಬಲ ಜಾಗತಿಕ ಬದ್ಧತೆ ಹಾಗೂ ಬಹುಪಕ್ಷೀಯ ಮಾತುಕತೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಮಾತುಕತೆ ಅತ್ಯಂತ ಮಹತ್ವದ್ದಾಗಿದೆ. ಯಶಸ್ವಿಯಾಗಿ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ. 21ನೇ ಶತಮಾನದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ಹಾಗೂ ಬಡತನ ನಿರ್ಮೂಲನೆ, ಅಭಿವೃದ್ಧಿಯ ಅಜೆಂಡಾ ವಿಚಾರಗಳ ಬಗ್ಗೆ ಪ್ರಸ್ತಾಪಿಸುವುದಾಗಿ ತಿಳಿಸಿದ್ದಾರೆ.

ವಾಷಿಂಗ್ಟನ್ ನಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿಯಾಗುತ್ತಿದ್ದು, ಅವರೊಂದಿಗೆ ಇದು ನನ್ನ ಮೊದಲ ಸಭೆಯಾಗಿದೆ. ಈ ಭೇಟಿ ಜಗತ್ತಿನ ಎರಡು ದೊಡ್ಡ ಪ್ರಜಾಪ್ರಭುತ್ವ ರಾಷ್ಟಗಳ ನೈಸರ್ಗಿಕ ಪಾಲುದಾರಿಕೆಗೆ ತಳಹದಿಯಾಗಲಿದೆ. ದೇಶದ ಅಭಿವೃದ್ಧಿಗೆ ಪೂರಕವಾಗುವಂತಹ, ಶಿಕ್ಷಣಿಕ, ಸಂಶೋಧನೆ, ತಂತ್ರಜ್ನಾನ, ಮಾನವೀಯ ಮೌಲ್ಯಗಳು ಮೊದಲಾದ ವಿಚಾರಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗುವುದು. ಉಭಯ ನಾಯಕರ ಈ ಭೇಟಿ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆಯುವ ವಿಶ್ವಾಸವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ.

ಅಮೆರಿಕಾ ಭೇಟಿ ದ್ವಿಪಕ್ಷೀಯ ಸಂಬಂಧಗಳ ಬಲವರ್ದನೆಗೆ ವೇದಿಕೆಯಾಗಲಿದೆ. ವಾಷಿಂಗ್ಟನ್ನಲ್ಲಿ ಯುಎಸ್ ವ್ಯಾಪಾರ ಸಮುದಾಯಕ್ಕೆ ಭೇಟಿ ನೀಡುವುದಾಗಿ, ಅಮೆರಿಕ ಮೂಲದ ಪ್ರಮುಖ ಕಂಪನಿಗಳು, ಉದ್ಯಮಿಗಳ ಜತೆ ಮಾತುಕತೆ ನಡೆಸಿ ದೇಶದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗುವಂತೆ ಭಾರತದಲ್ಲಿ ಬಂಡವಾಳ ಹೂಡಲು ಆಹ್ವಾನ ನೀಡುವುದಾಗಿ ತಿಳಿಸಿದ್ದಾರೆ.

ಎರಡು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ಸಂಬಂಧಗಳ ಸೇತುವೆಯಂತಿರುವ, ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಯುನೈಟೆಡ್ ಸ್ಟೇಟ್ಸ್ ಗೆ ತಮ್ಮದೇ ಕೊಡುಗೆಗಳನ್ನು ನೀಡುರಿವ, ಅನಿವಾಸಿ ಭಾರತೀಯರನ್ನು ನ್ಯೂಯಾರ್ಕ್ ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ ನಲ್ಲಿ ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಅಮೆರಿಕದ ನ್ಯಾಷನಲ್ ಸೈನ್ಸ್ ಫೌಂಡೇಷನ್ ಮತ್ತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಜತೆ ಉನ್ನತ ಮಟ್ಟದ ಶೈಕ್ಷಣಿಕ ಒಪ್ಪಂದ ಮಾಡಿಕೊಳ್ಳುವ ನಿರೀಕ್ಷೆಯಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited