ಮುಂಬೈ : ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡುವಂತೆ ಕೇಂದ್ರ ಸಚಿವ ಸಂಪುಟ, ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಶಿಫಾರಸು ಮಾಡಿದೆ.
ಮಹಾರಾಷ್ಟ್ರದಲ್ಲಿನ ರಾಜಕೀಯ ಸ್ಥಿತಿ ಕುರಿತು ಪರಾಮರ್ಶಿಸಲು ಕೇದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.
ಮುಂಬರುವ ವಿಧಾನಸಭಾ ಚುನಾವಣೆ ಸೀಟು ಹಂಚಿಕೆ ವಿವಾದ ಇತ್ಯರ್ಥವಾಗದ ಹಿನ್ನಲೆಯಲ್ಲಿ ಕಳೆದ ಎರಡು ದಿನಗಳ ಹಿಂದಷ್ಟೇ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದುಕೊಂಡಿತ್ತು. ಈ ಹಿನ್ನಲೆಯಲ್ಲಿ ಪೃಥ್ವಿರಾಜ್ ಚವಾಣ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾಜೀನಾಮೆ ಸ್ವೀಕರಿಸಿರುವ ರಾಜ್ಯಪಾಲ ವಿದ್ಯಾಸಾಗರ್ ರಾವ್, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಇದನ್ನು ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದೆ.