Untitled Document
Sign Up | Login    
Dynamic website and Portals
  
September 29, 2014

ತಮಿಳುನಾಡು ನೂತನ ಸಿಎಂ ಆಗಿ ಪನ್ನೀರ್ ಸೆಲ್ವಂ ಪ್ರಮಾಣ ವಚನ

ತಮಿಳುನಾಡು ನೂತನ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ತಮಿಳುನಾಡು ನೂತನ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ

ಚೆನ್ನೈ : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜಯಲಲಿತಾ ಆಪ್ತ ಹಾಗೂ ಹಣಕಾಸು ಸಚಿವ ಪನ್ನೀರ್ ಸೆಲ್ವಂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರೋಸಯ್ಯ ಪ್ರಮಾಣ ವಚನ ಬೋಧಿಸಿದ್ದು, ಪನ್ನೀರ್ ಸೆಲ್ವಂ ಕಣ್ಣೀರಿಡುತ್ತಾ, ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿದರು.

ಪನ್ನೀರ್ ಸೆಲ್ವಂ ಜತೆ 12 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಾನ್ಸಿ ಭೂ ಹಗರಣದಲ್ಲಿ ಸಿಲುಕಿದ್ದ ಜಯಲಲಿತಾ, ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ 2001ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಂದು ಕೆಲ ತಿಂಗಳವರೆಗೆ ಪನ್ನೀರ್ ಸೆಲ್ವಂ ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಈಗ ಎರಡನೇ ಬಾರಿಗೆ ಸೆಲ್ವಂ ಅವರಿಗೆ ಮುಖ್ಯಮಂತ್ರಿ ಪಟ್ಟ ಒಲಿದಂತಾಗಿದೆ.

ಜಯಲಲಿತಾ ಅವರಿಗೆ ಜಾಮೀನು ಸಿಗುವವರೆಗೂ ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು ಬೆಳಿಗ್ಗೆಯಷ್ಟೇ ಪನ್ನೀರ್ ಸೆಲ್ವಂ ಹೇಳಿಕೆ ನೀಡಿದ್ದರು. ಆದರೆ ರಾಜ್ಯದಲ್ಲಿ ಅರಾಜಕತೆ ಉಂಟಾಗಲಿದ್ದು, ತಕ್ಷಣಕ್ಕೆ ಸರ್ಕಾರ ರಚನೆ ಅಗತ್ಯವಿರುವುದರಿಂದ ಜಯಲಲಿತ ಸೂಚನೆ ಮೇರೆಗೆ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited