ಬೆಂಗಳೂರು : ಅಕ್ರಮ ಸೈಟ್ ಪಡೆದ ಆರೋಪ ಹಿನ್ನಲೆಯಲ್ಲಿ ಸಕ್ಕರೆ ಹಾಗೂ ಸಹಕಾರ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಖಾಸಗಿ ದೂರಿನ ಅನ್ವಯ ಸಚಿವ ಮಹದೇವ್ ಪ್ರಸಾದ್ ವಿರುದ್ಧ ಲೋಕಾಯುಕ್ತ ಪೊಲೀಸರು ಚಾಮರಾಜನಗರ ಸೆಷನ್ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಸುಳ್ಳು ದಾಖಲೆಗಳನ್ನು ನೀಡಿ ಕರ್ನಾಟಕ ಗೃಹ ಮಂಡಳಿಯಿಂದ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ಮಹದೇವ್ ಪ್ರಸಾದ್ ಅಕ್ರಮವಾಗಿ ಸೈಟ್ ಪಡೆದುಕೊಂಡಿದ್ದಾರೆ ಎಂದು ಹಿರೇಬೇಗೂರು ನಂದೀಶ್ ಎಂಬುವವರು ಖಾಸಗಿ ದೂರು ದಾಖಲಿಸಿದ್ದರು.