ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಅಮೆರಿಕಾ ಪ್ರವಾಸಕ್ಕೆ ಇಂದು ತೆರೆ ಬೀಳಲಿದ್ದು, ವಾಷಿಂಗ್ಟನ್ ಡಿಸಿಯಲ್ಲಿನ ಗಾಂಧಿ ಪ್ರತಿಮೆಗೆ ಪ್ರಧಾನಿ ಪುಷ್ಪ ನಮನ ಸಲ್ಲಿಸಿದರು.
ವಾಷಿಂಗ್ಟನ್ ಡಿಸಿಯಲ್ಲಿರುವ ಗಾಂಧಿ ಮೆಮೋರಿಯಲ್ ಹಾಲ್ ಗೆ ಆಗಮಿಸಿದ ಪ್ರಧಾನಿ ಮೋದಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಾಥ್ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರನ್ನು ನೋಡಲು ಜನಸಾಗರವೇ ಹರಿದು ಬಂದಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ತುಂಬಿದ್ದ ಭಾರತೀಯರು, ಮೋದಿ, ಮೋದಿ ಎಂದು ಕೂಗಿ ಹರ್ಷ ವ್ಯಕ್ತಪಡಿಸಿದರು.
ಈ ಮಧ್ಯೆ ವಾಷಿಂಗ್ಟನ್ ನಲ್ಲಿ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ’ಕೆಮ್ ಛೋ’ ಎಂದು ಗುಜರಾತಿ ಭಾಷೆಯಲ್ಲಿಯೇ ಮೋದಿಯವರನ್ನು 'ಹೇಗಿದ್ದೀರಾ?' ಎಂದು ಕೇಳಿದ್ದಾರೆ.
ಮೋದಿಯವರನ್ನು ಒಬಾಮ ಔತಣಕೂಟಕ್ಕೆ ಆಮಂತ್ರಿಸಿದ್ದು, ಭೋಜನಕೂಟದಲ್ಲಿ ಸುಷ್ಮಾ ಸ್ವರಾಜ್ ಕೂಡ ಭಾಗವಹಿಸಿದ್ದರೆಂದು ಭಾರತೀಯ ವಿದೇಶಾಂಗ ವ್ಯವಹಾರ ಸಚಿವಾಲಯದ ವಕ್ತಾರ ಸಯ್ಯದ್ ಅಕ್ಬರುದ್ದೀನ್ ಟ್ವಿಟ್ ಮಾಡಿದ್ದಾರೆ.
ಚಿತ್ರ ಕೃಪೆ:www.pmindia.gov.in