Untitled Document
Sign Up | Login    
Dynamic website and Portals
  
October 2, 2014

ಪ್ರಧಾನಿ ಮೋದಿ ಹೊಗಳಿದ ಶರದ್ ಪವಾರ್

ನವದೆಹಲಿ : ಹಿಂದಿನ ಪ್ರಧಾನಿಗಳಿಗೆ ಹೋಲಿಸಿದರೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಮಾರುಕಟ್ಟೆ ವ್ಯವಹಾರ ಕೌಶಲ್ಯ ರೂಢಿಸಿಕೊಂಡಿದ್ದಾರೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈ ಸಂದರ್ಭದಲ್ಲಿ ಶರದ್ ಪವಾರ್ ಈ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ಮನಮೋಹನ್ ಸಿಂಗ್ ಅವಧಿಯಲ್ಲಿ ಭಾರತ ಅಮೆರಿಕ ಜತೆ ಉತ್ತಮ ಸಂಬಂಧ ಹೊಂದಿತ್ತು. ಆದರೆ ಪ್ರಧಾನಿ ಮೋದಿ ಭಾರತದ ಅಗತ್ಯವನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯೂಯಾರ್ಕ್ ನಲ್ಲೇ ಹೆಚ್ಚಿನ ಪ್ರಮಾಣದಲ್ಲಿ ಭಾರತೀಯರು ಇರುವುದರಿಂದ ಅಲ್ಲಿಯೇ ಹೆಚ್ಚಿನ ಸಮಯವನ್ನು ಮೋದಿ ಕಳೆದಿದ್ದಾರೆ. ಈ ಮೂಲಕ ದೇಶಕ್ಕೆ ಹೆಚ್ಚಿನ ಬಂಡವಾಳ ಹೂಡಿಕೆನಿರೀಕ್ಷೆ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಅಲ್ಲದೇ ಲೋಕಸಭೆ ಚುನಾವಣೆ ಮಾದರಿಯ ಫಲಿತಾಂಶ ಮರಾಷ್ಟ್ರ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ದೊರೆಯಲಾರದು ಎಂದು ಶರದ್ ಪವಾರ್ ಇದೇ ವೇಳೆ ಅಭಿಪ್ರಾಯಪಟ್ಟಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited