Untitled Document
Sign Up | Login    
Dynamic website and Portals
  
October 3, 2014

ಮೋಹನ್ ಭಾಗವತ್ ಭಾಷಣವನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : 'ಆರ್.ಎಸ್.ಎಸ್' ಮುಖಂಡ ಮೋಹನ್ ಭಾಗವತ್ ಅವರ ಭಾಷಣವನ್ನು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.

ನಾಗ್ಪುರದಲ್ಲಿ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್ ಅವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ್ದರು. ಈ ಭಾಷಣಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೋಹನ್ ಭಾಗವತ್ ಅವರು ಭಾಷಣದಲ್ಲಿ ಪ್ರಸ್ತಾಪಿಸಿರುವ ವಿಷಯಗಳು ಇಂದಿನ ದಿನಗಳಿಗೆ ಪ್ರಸ್ತುತ ಹಾಗೂ ಸೂಕ್ತವಾಗಿದೆ ಎಂದು ಹೇಳಿದ್ದಾರೆ.

ಮೋಹನ್ ಭಾಗವತ್ ಜೀ ತಮ್ಮ ಭಾಷಣದಲ್ಲಿ ರಾಷ್ಟ್ರೀಯ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಮೋಹನ್ ಭಾಗವತ್ ತಮ್ಮ ಭಾಷಣದಲ್ಲಿ ಸಂಪೂರ್ಣ ಗೋಹತ್ಯಾ ನಿಷೇಧ ಜಾರಿಗೆ ಒತ್ತಾಯಿಸಿದ್ದರು. ಅಲ್ಲದೇ ಬಾಂಗ್ಲಾದಿಂದ ಅಕ್ರಮ ವಲಸಿಗರು ಬರುವುದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದ್ದರು.

ಆರ್.ಎಸ್.ಎಸ್ ಮುಖಂಡರ ಭಾಷಣವನ್ನು ದೂರದರ್ಶನ ನೇರ ಪ್ರಸಾರ ಮಾಡಿತ್ತು. ಈ ನಡೆಗೆ ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷಗಳು, ಇತಿಹಾಸಕಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited