Untitled Document
Sign Up | Login    
Dynamic website and Portals
  
October 4, 2014

ದಸರಾ ಆಚರಣೆ: ಪಾಟ್ನಾದಲ್ಲಿ ಕಾಲ್ತುಳಿತಕ್ಕೆ 30ಕ್ಕೂ ಹೆಚ್ಚು ಜನರ ಸಾವು

ಪಾಟ್ನಾ : 'ದಸರಾ' ಆಚರಣೆ ಅಂಗವಾಗಿ ಪಾಟ್ನಾಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಲ್ತುಳಿತ ಉಂಟಾಗಿ ಮೂವತ್ತೆರಡು ಜನ ಸಾವನ್ನಪ್ಪಿದ್ದಾರೆ. ಕಾಲ್ತುಳಿತದಲ್ಲಿ ಹಲವು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರಲ್ಲಿ ಸುಮಾರು 20 ಜನ ಮಹಿಳೆಯರು ಹಾಗು 5-6 ಮಕ್ಕಳು ಎಂದು ಬಿಹಾರ ಗೃಹ ಕಾರ್ಯದರ್ಶಿ ಅಮಿರ್ ಸುಭಾನಿ ತಿಳಿಸಿದ್ದಾರೆ.

ದಸರಾದ ಪ್ರಮುಖ ಕಾರ್ಯಕ್ರಮವನ್ನು ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಜನ ಸೇರಿದ್ದರು. ಜನರು 'ರಾವಣ ವಧೆ' ಕಾರ್ಯಕ್ರಮವನ್ನು ವೀಕ್ಷಿಸಿ ವಾಪಸ್ಸಾಗುವಾಗ ಈ ದುರಂತ ನಡೆದಿದೆ. 60 ಅಡಿ ಎತ್ತರದ ರಾವಣ ಪ್ರತಿಕೃತಿಗೆ ಬಾಣಬಿಟ್ಟು ಅಗ್ನಿಸ್ಪರ್ಶ ಮಾಡುವುದನ್ನು ವೀಕ್ಷಿಸಲು ಜನ ನೆರೆದಿದ್ದರು. ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಸಹ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಧಾನಿ ನರೇಂದ್ರ ಮೋದಿಯವರು ಬಿಹಾರ ಮುಖ್ಯಮಂತ್ರಿ ಜೊತೆ ಮಾತನಾಡಿ ಕಾಲ್ತುಳಿತ ದುರಂತದ ವಿವರಗಳನ್ನು ಪಡೆದುಕೊಂಡಿದ್ದಾರೆ. ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited