ಜಮಾನ್ ನಗರ್ : 'ಗುಜರಾತ್' ನ ಜಾಮ್ ನಗರ್ ಕರಾವಳಿ ಭಾಗದಲ್ಲಿ ಪಾಕಿಸ್ತಾನ ಮೂಲದ 6 ಮೀನುಗಾರರನ್ನು ಕರಾವಳಿ ಭದ್ರತಾ ಸಿಬ್ಬಂದಿಗಳು ಬಂಧಿಸಿದ್ದಾರೆ.
ಅತಿಕ್ರಮಣ ಪ್ರವೇಶ ಮಾಡಿದ್ದ ಹಿನ್ನೆಲೆಯಲ್ಲಿ ಪಾಕಿಸ್ತಾನ ಮೂಲದ ಮೀನುಗಾರರನ್ನು ಬಂಧಿಸಲಾಗಿದ್ದು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಮೀನುಗಾರರನ್ನು ಅ.6ರಂದು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಕರಾವಳಿ ಭದ್ರತಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಪಾಕಿಸ್ತಾನ ಕಡಲ ಭದ್ರತಾ ಸಂಸ್ಥೆ 82 ಭಾರತೀಯ ಮೂಲದ ಮೀನುಗಾರರನ್ನು ಬಂಧಿಸಿ 13 ದೋಣಿಗಳನ್ನು ವಶಪಡಿಸಿಕೊಂಡಿತ್ತು. ಗಡಿ ಭಾಗದಲ್ಲಿ ಪಾಕಿಸ್ತಾನ ಹಾಗೂ ಭಾರತ ಮೀನುಗಾರರನ್ನು ಪದೇ ಪದೇ ಬಂಧಿಸಲಾಗುತ್ತಿದೆ.