ಮುಂಬೈ : 'ಬಿಜೆಪಿ' ವಿರುದ್ಧ ಶಿವಸೇನೆ ವಾಗ್ದಾಳಿ ಮುಂದುವರೆಸಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಸರಣಿ ಪ್ರಚಾರ ಕೈಗೊಂಡಿರುವುದನ್ನು ಟೀಕಿಸಿರುವ ಶಿವಸೇನೆ, ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿನ ಕೆಲಸ ಬಿಟ್ಟು ಮಹಾರಾಷ್ಟ್ರಕ್ಕೆ ಬಂದು ಪ್ರಚಾರ ನಡೆಸುತ್ತಿದ್ದಾರೆ ಎಂದು ಕಿಡಿ ಕಾರಿದೆ.
ಪ್ರಧಾನಿ ಮೋದಿ ದೆಹಲಿಯಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ಮಹಾರಾಷ್ಟ್ರ ಪ್ರಚಾರದಲ್ಲಿ ತೊಡಗಿರುವುದನ್ನು
ಸಾಮ್ನಾದ ಸಂಪಾದಕೀಯದಲ್ಲಿ ಟೀಕಿಸಲಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಜನಪ್ರಿಯ ನಾಯಕರ ಕೊರತೆ ಎದುರಿಸುತ್ತಿದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಚಾರ ಮಾಡುವಂತೆ ಒತ್ತಾಯಿಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಶಿವಸೇನೆ ವಾಗ್ದಾಳಿ ನಡೆಸಿದೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ಆರೋಪ ಮಾಡಿರುವ ಶಿವಸೇನೆ, ನಾವು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡುವುದಿಲ್ಲ. ಆದರೆ ಮೋದಿ ಪ್ರಧಾನಿಯಾದ ಬಳಿಕ ಮಹಾರಾಷ್ಟ್ರಕ್ಕಾಗಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದೆ.