Untitled Document
Sign Up | Login    
Dynamic website and Portals
  
October 8, 2014

ನಿಗಮ ಮಂಡಳಿ ನೇಮಕಾತಿ ಪಟ್ಟಿ ಸಿದ್ಧಗೊಂಡಿಲ್ಲ: ಡಾ.ಪರಮೇಶ್ವರ್

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು : ನಿಗಮ ಮಂಡಳಿ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ಷೇತ್ರದಿಂದ 10 ಜನರ ಪಟ್ಟಿ ನೀಡುವಂತೆ ಸೂಚಿಸಿದ್ದೇನೆ. ಆದರೆ 34 ಕ್ಷೇತ್ರಗಳಿಂದ ಇನ್ನೂ 10 ಜನರ ಪಟ್ಟಿ ಬಂದಿಲ್ಲ. ಆ ಪಟ್ಟಿ ಬಂದ ಬಳಿಕ ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ಸಿದ್ಧಗೊಳಿಸಲಾಗುವುದು ಎಂದರು.

ಶಾಸಕರು, ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗುವುದು ಎಂದು ಹೇಳಿದರು.

ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟ ವಿಸ್ತರಣೆಗೆ ನಾನು ಕಲ್ಲು ಹಾಕಿಲ್ಲ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಮಾಧಿಕಾರ, ಅವರ ವಿವೇಚನೆಗೆ ಬಿಟ್ಟದ್ದು, ಅವರು ಮನಸ್ಸು ಮಾಡಿದರೆ ನಾಳೆಯೇ ಸಂಪುಟ ವಿಸ್ತರಣೆ ಮಾಡಬಹುದು ಎಂದು ಪರಮೇಶ್ವರ್ ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited