ನವದೆಹಲಿ : ವಾಹನ ಸವಾರರಿಗೆ ಸಿಹಿಸುದ್ದಿ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮತ್ತೆ ಇಳಿಕೆಯಾಗುವ ಸಾಧ್ಯತೆಯಿದೆ.
ಮಹಾರಾಷ್ಟ್ರ ಹಾಗೂ ವಿಧಾನಸಭ ಚುನಾವಣೆ ಮುಗಿದ ಬಳಿಕ, ಅ.15ರ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಯಾಗುವ ಸಂಭವವಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಪೆಟ್ರೋಲ್ ದರ 1ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 2.50 ರೂ ನಷ್ಟು ಇಳಿಕೆಯಾಗಲಿದೆ.
ಈ ವರ್ಷ ಕಚ್ಚಾ ತೈಲ ಬೆಲೆಯಲ್ಲಿ ಶೇ.18ರಷ್ಟು ಬೆಲೆ ಇಳಿಕೆಯಾಗಿದೆ. ಇದು ಕಳೆದ 27 ತಿಂಗಳುಗಳಲ್ಲಿ ಕನಿಷ್ಟ ಬೆಲೆಯಾಗಿದೆ. ಈ ಹಿನ್ನಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆಯಾಗಲಿದೆ ಎಂದು ತಿಳಿದುಬಂದಿದೆ.