Untitled Document
Sign Up | Login    
Dynamic website and Portals
  
October 9, 2014

ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕನಸು: ಕರುಣಾನಿಧಿ

ಚೆನ್ನೈ : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಡಿಎಂಕೆ ಮುಖ್ಯಸ್ಥ ಕರುಣಾನಿಧಿ, ಜಯಲಲಿತಾ ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದು ಎಂದು ತಿಳಿಸಿದ್ದಾರೆ.

ಜಯಲಲಿತಾ ಅವರಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದರೂ ಈ ವರೆಗೆ ಪ್ರತಿಕ್ರಿಯೆ ನೀಡದ ಕರುಣಾನಿಧಿ ಇದೇ ಮೊದಲಬಾರಿಗೆ ಮೌನಮುರಿದಿದ್ದು, ಜಯಲಲಿತಾ ತಾವು ಹೆಣೆದ ಬಲೆಯಲ್ಲಿ ತಾವೇ ಬಿದ್ದಿದಾರೆ. ಅವರು ಮತ್ತೆ ಅಧಿಕಾರಕ್ಕೆ ಬರುವುದು ಕೇವಲ ಕನಸು ಎಂದರು.

ಜಯಲಲಿತಾ ಅವರು ತಾವು ಏನು ಮಾಡಿದರೂ ಯಾರೂ ಪ್ರಶ್ನೆ ಮಾಡುವುದಿಲ್ಲ ಎಂಬ ಸಂದರ್ಭವನ್ನು ಸೃಷ್ಟಿಸಿದ್ದರು. ಆದರೆ ಇಂದು ಅವರ ತಪ್ಪುಗಳೇ ಅವರಿಗೆ ಮುಳುವಾಗಿದ್ದು, ಈ ಪತನ ಅವರಿಗೆ ಪಾಠವಾಗಲಿದೆ ಎಂದು ವಾಗ್ದಾಳಿ ನಡೆಸಿದರು.

ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರುಣಾನಿಧಿ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನಿರಲು, ಕರುಣಾನಿಧಿ ಕುಟುಂಬಸ್ಥರೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರಿಂದ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದೇ ಹೇಳಲಾಗಿತ್ತು. ಆದರೆ ಈಗ ಈ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited