Untitled Document
Sign Up | Login    
Dynamic website and Portals
  
October 9, 2014

ಕಾಂಗ್ರೆಸ್-ಎನ್ ಸಿಪಿ ಭ್ರಷ್ಟಾಚಾರವಾದಿಗಳು: ಪ್ರಧಾನಿ ಮೋದಿ

ಮುಂಬೈ : ಕಾಂಗ್ರೆಸ್ ಮತ್ತು ಎನ್ ಸಿಪಿ ಎರಡೂ ಪಕ್ಷಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ, ಎರಡೂ ಪಕ್ಷಗಳೂ ಭ್ರಷ್ಟಾಚಾರವಾದಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ರಾಹುರಿಯಲ್ಲಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಳೆದ 15 ವರ್ಷಗಳಿಂದಲೂ ಮಹಾರಾಷ್ಟ್ರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದರು.

ಕಾಂಗ್ರೆಸ್ ಹಾಗೂ ಎನ್ ಸಿಪಿ ನಡುವೆ ಯಾವುದೇ ವ್ಯತ್ಯಾಸವಿಲ್ಲ, ಉಭಯ ಪಕ್ಷಗಳದ್ದೂ ಒಂದೇ ಗೋತ್ರ, ಎರಡೂ ಪಕ್ಷಗಳೂ ಭ್ರಷ್ಟಾಚಾರವಾದಿಗಳೇ. ಆದರೆ ಈಗ ನಾಟಕವಾಡುತ್ತಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಬಗ್ಗೆ ಯಾವೂದೇ ಗಮನವನ್ನೂ ಹರಿಸಿಲ್ಲ, ಎರಡೂ ಪಕ್ಷಗಳು ರಾಜ್ಯದಲ್ಲಿ ಲೂಟಿ ಮಾಡಿವೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕ್ ಸೇನೆ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ, ಗುಂಡಿನ ದಾಳಿ ನಡೆಸುತ್ತಿದ್ದರೂ ಪ್ರಧಾನಿ ಮೋದಿ ಮೌನವಹಿಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದ ಅವರು, ಗಡಿ ವಿಚಾರವನ್ನು ವಿಪಕ್ಷಗಳು ಅನಗತ್ಯ ರಾಜಕಾರಣ ಮಾಡುತ್ತಿವೆ ಎಂದರು.

ಭಾರತೀಯ ಯೋಧರು ಈಗಾಗಲೇ ಪಾಕ್ ಸೇನೆಗೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ನಮ್ಮ ಜವಾಬ್ದಾರಿಯ ಬಗ್ಗೆ ನಮಗೆ ತಿಳಿದಿದೆ. ನಿಮ್ಮಿಂದ ಕಲಿಯಬೇಕಿಲ್ಲ ಎಂದು ಗುಡುಗಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited