ನವದೆಹಲಿ : ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ. ಅಲ್ಲದೆ ಬೆಳಗಾಂ ಜಿಲ್ಲೆಯನ್ನು 'ಬೆಳಗಾವಿ' ಎಂದು ನವಂಬರ್ 1 ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನೆಲ, ಜಲ ವಿಚಾರದಲ್ಲಿ ರಾಜ್ಯದ ಹಿತವನ್ನು ಕಾಪಾಡುವುದು ಸರ್ಕಾರ ಜವಾಬ್ದಾರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಮರುಪರಿಶೀಲನೆ ಅರ್ಜಿ ಸಲ್ಲಿಸಿ ಮಹಾಜನ್ ಆಯೋಗದ ವರದಿಯನ್ನು ಜಾರಿ ಮಾಡುವಂತೆ ಮನವಿ ಮಾಡಲಾಗುವುದು. ಗಡಿ ವಿಚಾರದಲ್ಲಿ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಸಿ.ಎಂ ಸ್ಪಷ್ಟಪಡಿಸಿದ್ದಾರೆ.