ನವದೆಹಲಿ : ಮಹತ್ವಾಕಾಂಕ್ಷಿ ಸಂಸದ ಆದರ್ಶ ಗ್ರಾಮ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಲಿದ್ದಾರೆ.
ಅ.15ರಂದು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ಮೋದಿ ಈ ಕುರಿತು ಘೋಷಣೆ ಮಾಡಿದ್ದರು. ಪ್ರತಿಯೊಬ್ಬ ಸಂಸದರು 2016ರ ವೇಳೆಗೆ ಒಂದು ಗ್ರಾಮವನ್ನು ಆದರ್ಶ ಗ್ರಾಮವನ್ನಾಗಿ ಮಾಡಬೇಕು. ಅಂತೆಯೇ 2019ರ ವೇಳೆ ಮೂರು ಗ್ರಾಮಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಪ್ರಧಾನಿ ಮೋದಿ ಗಡುವು ನೀಡಿದ್ದಾರೆ.
ಲೋಕನಾಯಕ ಜಯಪ್ರಕಾಶ್ ನಾರಾಯಣ ಅವರ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯ ವಿಜ್ನಾನ ಭವದಲ್ಲಿ ಪ್ರಧಾನಿ ನರೇಂದ್ರ ಮೋದಿ ಆದರ್ಶ ಗ್ರಾಮ ಯೋಜನೆಗೆ ಚಾಲನೆ ನೀಡಲಿದ್ದಾರೆ.
ಸಂಸದ ಆದರ್ಶ ಗ್ರಾಮ ಯೋಜನೆಗೆ ಗ್ರಮೀಣಾಭಿವೃದ್ಧಿ ಸಚಿವಾಲಯ ನಿಯಮಾವಳಿಗಳನ್ನು ಸಿದ್ಧಗೊಳಿಸಿದೆ. ಗ್ರಾಮವನ್ನು ಸಂಸದರೇ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ನೀಡಲಾಗಿದ್ದು, 3-5ಸಾವಿರ ಜನಸಂಖ್ಯೆಯಿರುವ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಬೇಕು. ಗ್ರಾಮಗಳ ಅಭಿವೃದ್ಧಿಯಲ್ಲಿ ಮೂಲಸೌಕರ್ಯಕ್ಕೆ ಆದ್ಯತೆ ನೀಡಬೇಕು.