Untitled Document
Sign Up | Login    
Dynamic website and Portals
  
October 11, 2014

ಸಧ್ಯದಲ್ಲೇ ಬಿಜೆಪಿ ಸೇರಲಿರುವ ಸಿ.ಎಂ ಆಪ್ತ ಇಬ್ರಾಹಿಂ

ಸಧ್ಯದಲ್ಲೇ ಬಿಜೆಪಿ ಸೇರಲಿರುವ ಸಿ.ಎಂ ಆಪ್ತ ಇಬ್ರಾಹಿಂ

ಬೆಂಗಳೂರು : ಸಿ.ಎಂ ಸಿದ್ದರಾಮಯ್ಯ ಅವರ ಪರಮಾಪ್ತ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ಬಿಜೆಪಿಯತ್ತ ಮುಖಮಾಡಿದ್ದಾರೆ. ಸಧ್ಯದಲ್ಲೇ ಅವರು ಬಿಜೆಪಿ ಸೇರುವ ಸಾಧ್ಯತೆ ಇದೆ.

ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿಯ ಪ್ರಕಾರ, ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ದೊರೆಯದ ಹಿನ್ನೆಲೆಯಲ್ಲಿ ಸಿ.ಎಂ ಇಬ್ರಾಹಿಂ ಪಕ್ಷ ತೊರೆದು ಬಿಜೆಪಿ ಸೇರಲು ಮುಂದಾಗಿದ್ದು ಸದ್ಯದಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

ಸಿ.ಎಂ ಇಬ್ರಾಹಿಂ, ಬಿಜೆಪಿ ಸೇರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ ಮತ್ತು ನವೆಂಬರ್‌ನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಇಬ್ರಾಹಿಂ ಅವರ ಆಪ್ತ ಮೂಲಗಳು ತಿಳಿಸಿವೆ.

'ಸಿದ್ದರಾಮಯ್ಯ ಅವರು ನನ್ನ ಒಳ್ಳೆಯ ಸ್ನೇಹಿತ. ಆದರೆ ರಾಷ್ಟ್ರೀಯ ಹಿತದೃಷ್ಟಿಯಿಂದ ನಾನು ಬಿಜೆಪಿ ಸೇರಲು ನಿರ್ಧರಿಸಿದ್ದೇನೆ' ಎಂದು ಇಬ್ರಾಹಿಂ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

'ಇಬ್ರಾಹಿಂ ಅವರು ನನ್ನನ್ನು ಭೇಟಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಕೊಡಿಸುವಂತೆ ಕೇಳಿಕೊಂಡಿದ್ದಾರೆ' ಎಂದು ರಾಜ್ಯ ಬಿಜೆಪಿ ಮುಖಂಡರು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited