ಮುಂಬೈ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ವೈಯಕ್ತಿಕ ವಿಷಯಗಳನ್ನು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಮೂಲಕ ನರೇಂದ್ರ ಮೋದಿ, ಪ್ರಧಾನಿ ಹುದ್ದೆಗಿರುವ ಗೌರವ ಹಾಳು ಮಾಡುತ್ತಿದ್ದಾರೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಹುದ್ದೆ ಎಂಬುದು ಅತ್ಯಂತ ಗೌರವಯುತವಾದ ಸ್ಥಾನ. ಅದಕ್ಕೆ ತನ್ನದೇ ಆದ ಘನತೆ, ಗಾಂಭೀರ್ಯ ಇದೆ. ಆ ಸ್ಥಾನದಲ್ಲಿರುವವರು ಅದಕ್ಕೆ ತಕ್ಕಂತೆ ನಡೆದುಕೊಲ್ಲಬೇಕು. ಆದರೆ ಮೋದಿ ಹಾಗೆ ನಡೆದುಕೊಳ್ಳುತ್ತಿಲ್ಲ ಎಂದಿದ್ದಾರೆ.
ನರೇಂದ್ರ ಮೋದಿಯವರು ವೈಯಕ್ತಿಕ ವಿಷಯಗಳನ್ನು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಮೂಲಕ ಪ್ರಧಾನಿ ಹುದ್ದೆಗಿರುವ ಘನತೆಗೆ ಧಕ್ಕೆಯುಂಟುಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ತಾವು ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಣ್ಣಿಟ್ಟಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಉತ್ತಮ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.