Untitled Document
Sign Up | Login    
Dynamic website and Portals
  
October 15, 2014

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 5ಕ್ಕೂ ಹೆಚ್ಚು ಜನರ ಹತ್ಯೆ

ಇಸ್ಲಾಮಾಬಾದ್ : 'ಪಾಕಿಸ್ತಾನ'ದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 5 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಪ್ಘಾನಿಸ್ತಾನ ಗಡಿ ಪ್ರದೇಶದಲ್ಲಿರುವ ಖೈಬರ್ ಎಂಬ ಬುಡಕಟ್ಟು ಜಿಲ್ಲೆಯಲ್ಲಿ ಶಾಂತಿ ಸಮಿತಿ ಸಭೆ ನಡೆಯುತ್ತಿದ್ದ ವೇಳೆ ಈ ಆತ್ಮಾಹುತಿ ದಾಳಿ ನಡೆಸಲಾಗಿದೆ.

ಶಾಂತಿ ಸಮಿತಿಯ ಸದಸ್ಯರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಈ ದುರ್ಘಟನೆಯಲ್ಲಿ 5 ಬುಡಕಟ್ಟು ಜನರು ಮೃತಪಟ್ಟಿದ್ದರೆ 7ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಗಮಿಸಿರುವ ರಕ್ಷಣಾ ಸಿಬ್ಬಂಧಿಗಳು ಪರಿಶೀಲನೆ ನಡೆಸಿದ್ದಾರೆ.

ಆತ್ಮಹತ್ಯಾ ದಾಳಿಗೆ ಯಾವುದೇ ಉಗ್ರ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲ. ಆದರೆ ಘಟನಾ ಸ್ಥಳದಲ್ಲಿ ಲಷ್ಕರ್ ಎ ಇಸ್ಲಾಂ ಉಗ್ರ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಉಗ್ರಗಾಮಿಗಳ ವಿರುದ್ಧ ಪಾಕಿಸ್ತಾನ ಸರ್ಕಾರ ಖೈಬರ್ ಪ್ರದೇಶದಲ್ಲಿ ವಾಯುದಾಳಿ ನಡೆಸಿತ್ತು. ಆದರೂ ಉಗ್ರರು ಈ ಭಾಗದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited