Untitled Document
Sign Up | Login    
Dynamic website and Portals
  
October 16, 2014

ನಿಗಮ ಮಂಡಳಿ ನೇಮಕಕ್ಕೆ ದಿಗ್ವಿಜಯ್ ಸಿಂಗ್ ಗಡುವು

ಬೆಂಗಳೂರು : ಅ.25ರೊಳಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ ನೇಮಕಾತಿ ಪೂರ್ಣಗೊಳಿಸಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗಡುವು ನೀಡಿದರು.

ನಿಗಮ ನ್ಮಂಡಳಿ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಆಕಾಂಕ್ಷಿಗಳ ಒತ್ತಡ ಹೆಚ್ಚಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ದಿಗ್ವಿಜಯ್ ಸಿಂಗ್ ಅವರನ್ನು ಕುಮಾರ ಕೃಪಾದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು.

ಈ ವೇಳೆ ಕಾರ್ಯಕರ್ತರನ್ನು ಕಾಯಿಸುವುದು ಸರಿಯಲ್ಲ ಅವರ ತಾಳ್ಮೆಗೂ ಮಿತಿಯಿದೆ. ಅ.25ರ ವೇಳೆಗೆ ನಿಗಮ ಮಂಡಳಿಗಳಿ ಅಧ್ಯಕ್ಷರ ನೇಮಕಾತಿ ಪೂರ್ಣಗೊಳಿಸಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೇ ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿರುವುದು ಸಹಜ. ಅಂತಹ ಗೊಂದಲಗಳನ್ನು ನಿವಾರಿಸಿಕೊಂಡು ನೇಮಕಾತಿಯನ್ನು ಪುರ್ಣಗೊಳಿಸಬೇಕು ಎಂದು ಸಲಹೆ ನೀಡಿದರು.

ದಿಗ್ವಿಜಯ್ ಸಿಂಗ್ ಭೇಟಿ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಗಮ ಮಂಡಳಿ ನೇಮಕಾತಿ ಬಗ್ಗೆ ಚರ್ಚೆ ನಡೆಸಿದ್ದೇವೆ. ಈ ತಿಂಗಳೊಳಗೆ ನೇಮಕಾತಿ ನಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ, ಪಕ್ಷ ಸಂಘಟನೆ ಕುರಿತೂ ಸಮಾಲೋಚನೆ ನಡೆದಿದೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited