Untitled Document
Sign Up | Login    
Dynamic website and Portals
  
October 16, 2014

ಅರುಣಾಚಲ ಪ್ರದೇಶ, ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳು-ಸುಷ್ಮಾ ಸ್ವರಾಜ್

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್

ನವದೆಹಲಿ : 'ಅರುಣಾಚಲ ಪ್ರದೇಶ' ಹಾಗೂ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳು, ಈ ವಿಷಯವನ್ನು ಉನ್ನತ ಮಟ್ಟದ ಸಭೆಯಲ್ಲಿ ಚೀನಾಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

ಭಾರತದ ಪ್ರದೇಶಗಳನ್ನೂ ಹೊಂದಿರುವ ವಿವಾದಿತ ಚೀನಾದ ನಕ್ಷೆ ಅಲ್ಲಿನ ಮಿಲಿಟರಿ ಪಡೆಗೆ ಕೈ ಸೇರುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಕಾಂಗ್ರೆಸ್ ಸಂಸದ ಮುಲ್ಲಪಲ್ಲಿ ರಾಮಚಂದ್ರನ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಪತ್ರ ಬರೆದಿದ್ದರು. ಸಂಸದರ ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿ ಪತ್ರಕ್ಕೆ ಪ್ರತಿಕ್ರಿಯಿಸಿರುವ ಸುಷ್ಮಾ ಸ್ವರಾಜ್, ಅರುಣಾಚಲ ಪ್ರದೇಶ ಹಾಗೂ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗಗಳೆಂದು ಸ್ಪಷ್ಟಪಡಿಸಿದ್ದಾರೆ.

ಅರುಣಾಚಲ ಪ್ರದೇಶವನ್ನೂ ಒಳಗೊಂಡ ತನ್ನ ದೇಶದ ನಕ್ಷೆಯನ್ನು ಚೀನಾ ಸರ್ಕಾರ ಮಿಲಿಟರಿ ಪಡೆಗಳಿಗೆ ಹಂಚುತ್ತಿದೆ. ಈ ಮೂಲಕ ಅರುಣಾಚಲ ಪ್ರದೇಶದ ಮೇಲೆ ಚೀನಾ ಹಕ್ಕು ಸ್ಥಾಪನೆ ಮಾಡಲು ಯತ್ನಿಸುತ್ತಿದೆ, ಈ ಬಗ್ಗೆ ಚೀನಾಗೆ ಎಚ್ಚರಿಕೆ ನೀಡಬೇಕೆಂದು ರಾಮಚಂದ್ರನ್ ಸುಷ್ಮಾ ಸ್ವರಾಜ್ ಅವರನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಸಚಿವೆ, ಇತ್ತೀಚೆಗಷ್ಟೇ ಚೀನಾದೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಬೆಳವಣಿಗೆಯಲ್ಲಿ ಚೀನಾದ ಗಡಿಗೆ ಹೊಂದಿಕೊಂಡಂತಿರುವ ಅರುಣಾಚಲ ಪ್ರದೇಶದ ಮ್ಯಾಕ್ ಮೋಹನ್ ಗಡಿರೇಖೆ ಬಳಿ ರಸ್ತೆ ನಿರ್ಮಾಣದ ಭಾರತಸರ್ಕಾರದ ಪ್ರಸ್ತಾಪಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited