Untitled Document
Sign Up | Login    
Dynamic website and Portals
  
October 17, 2014

ಡಿ.ಕೆ.ಶಿ ಡಿನೋಟಿಫಿಕೇಶನ್ ಪ್ರಕರಣ: ವಿಚಾರಣೆಗೆ ವಿಶೇಷ ಪೀಠ ಸ್ಥಾಪಿಸಲು ಸುಪ್ರೀಂ ಆದೇಶ

ಇಂಧನ ಸಚಿವ ಡಿ.ಕೆ. ಶಿವಕುಮಾರ್ ಇಂಧನ ಸಚಿವ ಡಿ.ಕೆ. ಶಿವಕುಮಾರ್

ನವದೆಹಲಿ : ಇಂಧನ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆಗೆ ವಿಶೇಷ ಪೀಠ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅ.17ರಂದು ಸುಪ್ರೀಂ ಕೋರ್ಟ್ ನೀಡಿರುವ ಈ ಆದೇಶದಿಂದ ಡಿ.ಕೆ ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಡಿ.ಕೆ ಶಿವಕುಮಾರ್ ಸತ್ತವರ ಹೆಸರಿನಲ್ಲಿ ಡಿನೋಟಿಫಿಕೇಶನ್ ಮಾಡಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಎಂಬವರು ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆಗೆ ತಡೆ ನೀಡಬೇಕೆಂದು ಡಿ.ಕೆ ಶಿವಕುಮಾರ್ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದರು. ಡಿ.ಕೆ.ಶಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ 2013ರ ಮೇ 1 ರಂದು ತಡೆಯಾಜ್ಞೆ ನೀಡಿತ್ತು.

ಇದೀಗ ಡಿ.ಕೆ.ಶಿ ಡಿನೋಟಿಫಿಕೇಶನ್ ಪ್ರಕರಣದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶ ಎಚ್.ಎಲ್.ದತ್ತು ವಿಶೇಷ ಪೀಠವನ್ನು ಸ್ಥಾಪನೆ ಮಾಡಬೇಕೆಂದು ಆದೇಶ ನೀಡಿದ್ದಾರೆ. ಸುಪ್ರೀಂಕೋರ್ಟ್‍ಗೆ 10 ದಿನ ರಜೆ ಹಿನ್ನೆಲೆ ರಜೆ ಬಳಿಕ ವಿಶೇಷ ಪೀಠ ಸ್ಥಾಪನೆಯಾಗಲಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಬೆಂಗಳೂರಿನ ಬೆನ್ನಿಗಾನಹಳ್ಳಿಯಲ್ಲಿ ಸುಮಾರು 40 ಕೋಟಿ ರೂ. ಬೆಲೆಬಾಳುವ 4.01 ಎಕರೆ ಭೂಮಿಯನ್ನು ಡಿ.ಕೆ ಶಿವಕುಮಾರ್ ಮೃತಪಟ್ಟವರ ಹೆಸರಿನಲ್ಲಿ ಡಿನೋಟಿಫಿಕೇಶನ್ ಮಾಡಿಸಿದ್ದರು ಎಂದು ಟಿ.ಜೆ ಅಬ್ರಾಹಂ ಆರೋಪಿಸಿದ್ದರು.

ರಾಜಕಾರಣಿಗಳ ಮೇಲಿನ ಆರೋಪ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಲು ವಿಶೇಷ ಪೀಠ ಸ್ಥಾಪಿಸಿ ವಿಚಾರಣೆ ನಡೆಸಲಾಗುತ್ತದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited