Untitled Document
Sign Up | Login    
Dynamic website and Portals
  
October 17, 2014

ಜಮ್ಮು-ಕಾಶ್ಮೀರದಲ್ಲಿ ಕಿಡಿಗೇಡಿಗಳಿಂದ ಮತ್ತೊಮ್ಮೆ ಐ.ಎಸ್.ಐ.ಎಸ್ ಧ್ವಜ ಪ್ರದರ್ಶನ

ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಮತ್ತೊಮ್ಮೆ ಐ.ಎಸ್.ಐ.ಎಸ್ ಉಗ್ರ ಸಂಘಟನೆಧ್ವಜವನ್ನು ಪ್ರದರ್ಶಿಸಲಾಗಿದೆ. ಅ.17ರಂದು ರಾಜ್ಯದ ರಾಜಧಾನಿ ಶ್ರೀನಗರದಲ್ಲಿರುವ ಜಮ್ಮಾ ಮಸೀದಿಯಲ್ಲಿ ಕೆಲ ಯುವಕರು ರಾಜಾರೋಷವಾಗಿ ಐ.ಎಸ್.ಐ.ಎಸ್ ಧ್ವಜವನ್ನು ಪ್ರದರ್ಶಿಸಿದ್ದಾರೆ.

ಶುಕ್ರವಾರದ ಸಂಜೆ ಪ್ರಾರ್ಥನೆ ಬಳಿಕ ಈ ಬೆಳವಣಿಗೆ ನಡೆದಿದೆ. ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರದಲ್ಲಿ ಐ.ಎಸ್.ಐ.ಎಸ್ ಧ್ವಜವನ್ನು ಪ್ರದರ್ಶಿಸಲಾಗಿತ್ತು. ಆದರೆ ಈ ವಿಷಯವನ್ನು ನಿರಾಕರಿಸಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ, ಕಾಶ್ಮೀರದಲ್ಲಿ ಐ.ಎಸ್.ಐ.ಎಸ್ ಉಗ್ರ ಸಂಘಟನೆ ಅಸ್ಥಿತ್ವದಲ್ಲಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.

ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ನಗರದ ಹೃದಯ ಭಾಗದಲ್ಲಿರುವ ಮಸೀದಿಯ ಆವರಣದಲ್ಲಿ ಐ.ಎಸ್.ಐ.ಎಸ್ ಧ್ವಜವನ್ನು ಪ್ರದರ್ಶಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು, ಉಗ್ರ ಸಂಘಟನೆಧ್ವಜವನ್ನು ಪ್ರದರ್ಶಿಸಿದವರನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ.

ಬೆಂಗಳೂರು ಸೇರಿದಂತೆ ಹಲವು ಮೆಟ್ರೋ ನಗರಗಳನ್ನು ಗುರಿಯಾಗಿರಿಸಿಕೊಂಡು ಐ.ಎಸ್.ಐ.ಎಸ್ ಹಾಗೂ ಲಷ್ಕರ್-ಎ-ತೋಯ್ಬಾ ಉಗ್ರ ಸಂಘಟನೆ ಆತ್ಮಾಹುತಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಎನ್.ಎಸ್.ಜಿ ಡಿ.ಜಿ ಜಯಂತ್ ಚೌಧರಿ ಎಚ್ಚರಿಕೆ ನೀಡಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited