ಮುಂಬೈ : ಮಹಾರಾಷ್ಟ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆಯಾದರೂ ಸ್ಪಷ್ಟ ಬಹುತ ಸಿಗದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ದೇವೇಂದ್ರ ಫಡ್ನವಿಸ್, ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಎನ್ ಸಿಪಿ ಪಕ್ಷಗಳ 15 ವರ್ಷಗಳ ದುರಾಡಳಿತಕ್ಕೆ ಮಹಾರಾಷ್ಟ್ರದ ಜನತೆ ಬೇಸತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮೇಲಿನ ನಂಬಿಕೆಗೆ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ ಎಂದರು.
ಶಿವಸೇನೆ ನಮ್ಮ ರಾಜಕೀಯ ವಿರೋಧಿಯಲ್ಲ, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಗಳು ನಮ್ಮ ರಾಜಕೀಯ ವಿರೋಧಿಗಳು ಎಂದು ಫಡ್ನವಿಸ್ ತಿಳಿಸಿದರು. ಇದೇ ವೇಳೆ ಮಹಾರಾಷ್ಟ್ರ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರಕ್ಕೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಹಿರಿಯ ನಾಯಕರು ಸಿಎಂ ಅಭ್ಯರ್ಥಿ ಆಯ್ಕೆ ಮಾಡಲಿದ್ದಾರೆ ಎಂದು ತಿಳಿಸಿದರು.