Untitled Document
Sign Up | Login    
Dynamic website and Portals
  
October 19, 2014

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮರು ಮೈತ್ರಿ ಸಾಧ್ಯತೆ

ಮುಂಬೈ : ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮರು ಮೈತ್ರಿ ನಡೆಯುವ ಸಾಧ್ಯತೆಯಿದ್ದು, ಸಂಜೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ನಿರ್ಧಾರ ಹೊರಬೀಳಲಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇನ್ನೂ 45-50 ಸ್ಥಾನಗಳಲ್ಲಿ ಹಿನ್ನಡೆಯಲ್ಲಿದೆ. ಹೀಗಾಗಿ ಸಂಪೂರ್ಣ ಮತ ಎಣಿಕೆ ವೇಳೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗುವ ಅವಕಾಶವೂ ಇಲ್ಲದಿಲ್ಲ. ಒಂದು ವೇಳೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗದ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವೆ ಮರು ಮೈತ್ರಿಮಾಡಿಕೊಳ್ಳುವ ಸಾಧ್ಯತೆಯಿದೆ.

ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಜೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಕುರಿತು ಮಾತುಕತೆ ನಡೆಯಲಿದೆ. ಅಲ್ಲದೇ ಮುಖ್ಯಮಂತ್ರಿ ಅಭ್ಯರ್ಥಿ ಕುರಿತೂ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ಈ ನಡುವೆ ಮಾಹಾರಾಷ್ಟ್ರ ಬಿಜೆಪಿ ನಾಯಕರು ಹಾಗೂ ಶಿವಸೇನೆ ನಾಯಕರು ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಶಿವಸೇನೆ ಜತೆಗೆ ಮರು ಮೈತ್ರಿ ಮಾತುಕತೆ ವಿಫಲವಾದರೆ ಎನ್ ಸಿಪಿ ಜತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ.

ಈ ಮಧ್ಯೆ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಎನ್ ಸಿಪಿ ಬಾಹ್ಯ ಬೆಂಬಲ ನೀಡಲಿದೆ ಎಂದು ಎನ್ ಸಿಪಿ ನಾಯಕರು ಕೂಡ ಸಂದೇಶ ರವಾನಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ನಾಯಕರು ಎನ್ ಸಿಪಿ ನಾಯಕರ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ. ಶಿವಸೇನೆ ಮತ್ರಿ ಮುರಿದಲ್ಲಿ ಬಿಜೆಪಿಗೆ ಎನ್ ಸಿಪಿ ಸಾಥ್ ನೀಡಲಿದೆ ಎನ್ನಲಾಗುತ್ತಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited