Untitled Document
Sign Up | Login    
Dynamic website and Portals
  
October 19, 2014

ಮಹಾರಾಷ್ಟ್ರ-ಹರ್ಯಾಣದಲ್ಲಿ ಬಿಜೆಪಿ ಜಯಭೇರಿ

ಮುಂಬೈ/ಚಂಡಿಗರ್ : ಮಹಾರಾಷ್ಟ್ರ ಹಾಗೂ ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ.

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 123 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಸೇನೆ 62, ಕಾಂಗ್ರೆಸ್ 42, ಎನ್ ಸಿಪಿ 40, ಎಂ ಎನ್ ಎಸ್ 2 ಹಾಗೂ ಇತರೆ 19 ಸ್ಥಾನಗಳನ್ನು ಪಡೆದುಕೊಂಡಿವೆ.

ಈ ಮೂಲಕ ಕಳೆದ 15 ವರ್ಷಗಳಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್‌-ಎನ್‌.ಸಿ.ಪಿ. ಮೈತ್ರಿಕೂಟ ಸರಕಾರವನ್ನು ಮಹಾರಾಷ್ಟ್ರದ ಜನತೆ ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷ ಸರ್ಕಾರ ರಚನೆಗೆ 145 ಸ್ಥಾನಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಬಿಜೆಪಿ ಶಿವಸೇನೆಯೊಂದಿಗೆ ಮರು ಮೈತ್ರಿ ಮಾಡಿಕೊಳ್ಳುವ ಮೂಲಕ ಸರ್ಕಾರ ರಚನೆ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ಸಂಜೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಧಿಕೃತ ನಿರ್ಧಾರ ಹೊರಬೀಳಲಿದೆ.

ಇದೇ ಮೊದಲ ಬಾರಿಗೆ ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ. 90 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದ್ದು. ಹೀಗಾಗಿ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದೆ.

ಹರ್ಯಾಣದಲ್ಲಿ ಬಿಜೆಪಿ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ 15, ಐಎನ್ ಎಲ್ ಡಿ 19, ಹೆಚ್ ಜೆಸಿ 2 ಹಾಗೂ ಇತರೆ 6 ಸ್ಥಾನಗಳನ್ನು ಪಡೆದುಕೊಂಡಿವೆ.

ಬಿಜೆಪಿ ಭರ್ಜರಿ ಗೆಲುವು ಹಿನ್ನಲೆಯಲ್ಲಿ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ಹರ್ಯಾಣದ ಹ್ಯಾಟ್ರಿಕ್ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದ ಸಿಎಂ ಭೂಪಿಂದರ್ ಸಿಂಗ್ ಹೂಡಾ ಅವರ ಕನಸು ಭಗ್ನವಾಗಿದೆ. ಹರ್ಯಾಣದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತ್ತಿದ್ದು, ಮೂರನೇ ಸ್ಥಾನಕ್ಕೆ ಕುಸಿದಿದೆ.

ಹರ್ಯಾಣದಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತಿರುವ ಸಿಎಂ ಹೂಡಾ ಅವರು, ಹರ್ಯಾಣ ಜನತೆ ನೀಡಿರುವ ತೀರ್ಪಿಗೆ ನಾವು ತಲೆಬಾಗುವುದಾಗಿ ತಿಳಿಸಿದ್ದಾರೆ. ಹರ್ಯಾಣದಲ್ಲಿ ಭರ್ಜರಿ ಗೆಲವು ಸಾಧಿಸಿರುವ ಬಿಜೆಪಿಗೆ ಅಭಿನಂದನೆ ಸಲ್ಲಿಸಿದ ಅವರು, ಬಿಜೆಪಿ ಸರ್ಕಾರ ರಾಜ್ಯವನ್ನು ಮತ್ತಷ್ಟು ಅಭಿವೃದ್ಧಿ ಮಾಡಲಿ ಎಂದು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited