Untitled Document
Sign Up | Login    
Dynamic website and Portals
  
October 22, 2014

ಕಾಶ್ಮೀರ ಪ್ರವಾಹ ಸಂತ್ರಸ್ತರೊಂದಿಗೆ ಪ್ರಧಾನಿ ಮೋದಿ ದೀಪಾವಳಿ ಆಚರಣೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ಭೀಕರ ಪ್ರವಾಹದಿಂದ ತತ್ತರಿಸಿರುವ ಕಾಶ್ಮೀರದ ಸಂತ್ರಸ್ತರ ಜತೆ ಪ್ರಧಾನಿ ನರೇಂದ್ರ ಮೋದಿ ಈ ಬಾರಿಯ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಇದನ್ನು ಸ್ವತ: ಮೋದಿಯವರೇ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ಅ.23ರಂದು ತಾವು ಶ್ರೀನಗರಕ್ಕೆ ತೆರಳುತ್ತಿದ್ದು, ಪ್ರವಾಹದಿಂದ ತೊಂದರೆಗೀಡಾದ ಅಲ್ಲಿನ ಸಹೋದರ-ಸಹೋದರಿಯರ ಜತೆ ದಿನವನ್ನು ಕಳೆಯುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಈ ನಿರ್ಧಾರವನ್ನು ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸ್ವಾಗತಿಸಿದ್ದಾರೆ. ಮೋದಿಯವರು ತೋರಿದ ಈ ಔದಾರ್ಯ ಎಲ್ಲರೂ ಮೆಚ್ಚುವಂತದ್ದು ಎಂದು ಹೇಳಿದ್ದಾರೆ.

ಮೋದಿಯವರ ಈ ನಡೆಯನ್ನು ಪಿಡಿಪಿ ಸ್ವಾಗತಿಸಿದೆಯಾದರೂ ಭೇಟಿ ಸಂದರ್ಭವನ್ನು ಪ್ರಶ್ನಿಸಿದೆ. ಅಲ್ಲದೇ ಮೋದಿ ಈದ್ ಮಿಲಾದ್ ಸಂದರ್ಭದಲ್ಲಿ ಇಲ್ಲಿಗೆ ಆಗಮಿಸಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

ಈ ಮಧ್ಯೆ ಕಾಂಗ್ರೆಸ್ ವಕ್ತಾರ ಹುದ್ದೆಯಿಂದ ವಜಾಗೊಂಡಿರುವ ಶಶಿ ತರೂರ್ ಮೋದಿಯವರ ಕಾಶ್ಮೀರ ಭೇಟಿಯನ್ನು ಪ್ರಶ್ನೆ ಮಾಡಿದ್ದಾರೆ. ರಾಜ್ಯದಲ್ಲಿ ಚುನಾವಣೆ ನಡೆಯುವ ವೇಳೆ ಮೋದಿ ಭೇಟಿ ಅನುಮಾನಗಳಿಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited