Untitled Document
Sign Up | Login    
Dynamic website and Portals
  
October 22, 2014

ನೇಪಥ್ಯಕ್ಕೆ ಸರಿಯುತ್ತಿರುವ ಅಂಚೆಪೇದೆಗಳನ್ನು ಸಶಕ್ತರನ್ನಾಗಿಸುವ ಡಿಜಿಟಲ್ ಇಂಡಿಯಾ ಯೋಜನೆ

ನೇಪಥ್ಯಕ್ಕೆ ಸರಿಯುತ್ತಿರುವ ಅಂಚೆಪೇದೆಗಳನ್ನು ಸಶಕ್ತರನ್ನಾಗಿಸುವ ಡಿಜಿಟಲ್ ಇಂಡಿಯಾ ಯೋಜನೆ

ನವದೆಹಲಿ : 'ಇ-ಮೇಲ್' ಗಳದ್ದೇ ದರ್ಬಾರ್ ನಡೆಯುತ್ತಿರುವ ಇಂದಿನ ಯುಗದಲ್ಲಿ ಪೋಸ್ಟ್ ಮ್ಯಾನ್ ಸಹ ಮತ್ತೊಮ್ಮೆ ಪ್ರಸ್ತುತವಾಗುವ ಕಾಲ ಸನ್ನಿಹಿತವಾಗಿದೆ.

ಡಿಜಿಟಲ್ ಇಂಡಿಯಾ ಯೋಜನೆಯ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ನೇಪಥ್ಯಕ್ಕೆ ಸರಿಯುತ್ತಿರುವ ಪೋಸ್ಟ್ ಮ್ಯಾನ್ ಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಯೋಜನೆ ರೂಪಿಸಿದೆ.

ಇ-ಶಾಪಿಂಗ್‌ ತಾಣಗಳಾದ ಫ್ಲಿಪ್ ಕಾರ್ಟ್, ಸ್ನ್ಯಾಪ್ ಡೀಲ್, ಮಿಂತ್ರಾ ವೆಬ್ ಸೈಟ್ ಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಫ್ಲಿಪ್ ಕಾರ್ಟ್ ನೊಂದಿಗೆ ಒಪ್ಪಂದ ಮಾಡಿಕೊಳ್ಳುವುದರ ಭಾಗವಾಗಿ ದೂರದ ಗ್ರಾಮೀಣ ಭಾಗಗಳಿಗೆ ಗ್ರಾಹಕರು ಖರೀದಿಸುವ ವಸ್ತುಗಳನ್ನು ತಲುಪಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಪೋಸ್ಟ್ ಮ್ಯಾನ್(ಅಂಚೆ ಪೇದೆ)ಗಳನ್ನು ಸಮರ್ಥವಾಗಿ ಬಳಸಿಕೊಳ್ಳಲು ಮೋದಿ ಸರ್ಕಾರ ಉದ್ದೇಶಿಸಿದೆ.

ಸರ್ಕಾರದ ಪ್ರಸ್ತಾವನೆಯ ಭಾಗವಾಗಿ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಫ್ಲಿಪ್ ಕಾರ್ಟ್ ಹಾಗೂ ಇತರ ಇ-ಶಾಪಿಂಗ್‌ ತಾಣ ಕಂಪನಿಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಗ್ರಾಮೀಣ ಭಾಗದಲ್ಲಿರುವ ಜನತೆ ಆನ್ ಲೈನ್ ಮೂಲಕ ಖರೀದಿಸಿದರೆ ವಸ್ತುಗಳನ್ನು ನಿಗದಿತ ಸಮಯಕ್ಕೆ ತಲುಪಿಸಬೇಕಾಗುತ್ತದೆ. ಸಕಾಲದಲ್ಲಿ ವಸ್ತುಗಳನ್ನು ತಲುಪಿಸುವುದಕ್ಕೆ ಅಂಚೆ ಇಲಾಖೆ ಪ್ರಸಿದ್ಧಿ ಪಡೆದಿದ್ದು ಕೇಂದ್ರ ಸರ್ಕಾರದ ಯೋಜನೆಗೆ ಅನುಗುಣವಾಗಿ ಅಂಚೆಕಚೇರಿಗಳ ತಂತ್ರಜ್ಞಾನವನ್ನು ನವೀಕರಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited