Untitled Document
Sign Up | Login    
Dynamic website and Portals
  
October 25, 2014

ಜಮ್ಮು-ಕಾಶ್ಮೀರ,ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಮಾಡಲಿರುವ ಆಯೋಗ

ನವದೆಹಲಿ : 'ಕೇಂದ್ರ ಚುನಾವಣಾ ಆಯೋಗ' ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಇಂದು ಚುನಾವಣಾ ದಿನಾಂಕ ಘೋಷಿಸಲಿದೆ.

ಸಂಜೆ 4 ಗಂಟೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿರುವ ಚುನಾವಣಾ ಆಯೋಗ, ಉಭಯ ರಾಜ್ಯಗಳಿಗೂ ನಡೆಯಲಿರುವ ಚುನಾವಣೆಯ ದಿನಾಂಕವನ್ನು ಘೋಷಿಸಲಿದೆ. ಜನವರಿ 19ಕ್ಕೆ ಜಮ್ಮು-ಕಾಶ್ಮೀರ ವಿಧಾನಸಭೆ ಅವಧಿ ಮುಕ್ತಾಯಗೊಳ್ಳಲಿದೆ. ಜಾರ್ಖಂಡ್ ವಿಧಾನಸಭೆಯ ಅವಧಿ ಜನವರಿ 3ಕ್ಕೆ ಮುಕ್ತಾಯಗೊಳ್ಳಲಿದೆ. ಜನವರಿ ವೇಳೆಗೆ ಎರಡೂ ರಾಜ್ಯಗಳಲ್ಲಿ ನೂತನ ಸರ್ಕಾರ ಅಸ್ಥಿತ್ವಕ್ಕೆ ಬರಬೇಕಿದೆ.

ಜಮ್ಮು-ಕಾಶ್ಮೀರದಲ್ಲಿ ಪ್ರವಾಹ ಉಂಟಾಗಿದ್ದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗುವ ಸಾಧ್ಯತೆ ಇತ್ತಾದರೂ ಪ್ರವಾಹ ಉಂಟಾಗಿದ್ದ ಪ್ರದೇಶಗಳು ಸಹಜ ಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ನಿಗದಿತ ವೇಳೆಗೆ ಚುನಾವಣೆ ನಡೆಯಲಿದೆ. ಚುನಾವಣೆ ನಡೆಸುವ ಸಂಬಂಧ ಪರಿಶೀಲನೆ ನಡೆಸಲು ಚುನಾವಣಾ ಆಯೋಗದ ತಂಡ ಇತ್ತೀಚೆಗಷ್ಟೇ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿತ್ತು. ಭದ್ರತಾ ದೃಷ್ಠಿಯಿಂದ ಒಂದಕ್ಕಿಂತಲೂ ಹೆಚ್ಚು ಹಂತಗಳಲ್ಲಿ ಚುನಾವಣೆ ನಡೆಸುವ ಸಾಧ್ಯತೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited