Untitled Document
Sign Up | Login    
Dynamic website and Portals
  
October 25, 2014

ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್‌ ಚುನಾವಣಾ ದಿನಾಂಕ ಪ್ರಕಟ

ನವದೆಹಲಿ : ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್‌ ರಾಜ್ಯಗಳಲ್ಲಿ 5 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ವಿ.ಎಸ್.ಸಂಪತ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿ.ಎಸ್.ಸಂಪತ್, ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದರು. ಉಭಯ ರಾಜ್ಯಗಳಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ ಎಂದು ತಿಳಿಸಿದರು.

ನ.25ರಿಂದ ಡಿ.20ರ ವರೆಗಿನ ಅವಧಿಯಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉಭಯ ರಾಜ್ಯಗಳಲ್ಲಿ ನವೆಂಬರ್‌ 25ರಂದು ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್‌ 2ರಂದು ಎರಡನೇ ಹಂತ, ಡಿಸೆಂಬರ್ 9 ರಂದು ಮೂರನೇ ಹಂತ, ಡಿಸೆಂಬರ್ 14ರಂದು ನಾಲ್ಕನೇ ಮತ್ತು ಡಿಸೆಂಬರ್ 20ರಂದು ಐದನೇ ಹಂತದ ಮತದಾನ ನಡೆಯಲಿದೆ.ಡಿಸೆಂಬರ್ 23ರಂದು ಮತ ಎಣಿಕೆ ನಡೆಯಲಿದೆ ಎಂದು ವಿವರಿಸಿದರು.

ಅಕ್ಟೋಬರ್ 29ರಂದು ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್ ಎರಡೂ ರಾಜ್ಯಗಳಲ್ಲಿ ಅಧಿಸೂಚನೆ ಹೊರಡಿಸಲಾಗುತ್ತದೆ. ನ.2ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ನ.5 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನ.7ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದ್ದು, ನ.10 ನಾಮಪತ್ರ ವಾಪಸ್ ಗೆ ಕೊನೆಯ ದಿನವಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ದೆಹಲಿಯ 3 ಶಾಸಕರು ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿರುವ ಕಾರಣ ಇವರು ಪ್ರತಿನಿಧಿಸಿದ್ದ 3 ವಿಧಾನಸಭಾ ಕ್ಷೇತ್ರಗಳಿಗೆ ನ.25ರಂದು ಉಪಚುನಾವಣೆ ನಡೆಯಲಿದೆ ಎಂದ್ ಇದೇ ವೇಳೆ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited