ರಾಂಚಿ : ಜಾರ್ಖಂಡ್ ನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿಯಿಲ್ಲದೇ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ರಘುಬರ್ ದಾಸ್, ನಮ್ಮ ಪಕ್ಷ ಸ್ವಂತ ಬಲದ ಮೇಲೆ ಚುನಾವಣೆ ಎದುರಿಸುತ್ತದೆ.ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಜಾರ್ಖಂಡ್ ಜನತೆ ಬಿಜೆಪಿ ಜತೆಗಿದ್ದಾರೆ. ಇದು ಲೋಕಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
2009 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಯು ಮೈತ್ರಿಯೊಂದಿಗೆ ಚುನಾವಣೆ ಎದುರಿಸಿ 18 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈಬಾರಿ ಪ್ರಧಾನಿ ನರೇಂದ್ರ ಮೋದಿ ಅಲೆಯ ಮೇಲೆ ಭರವಸೆಯಿತ್ತು ಬಿಜೆಪಿ 81 ಸ್ಥಾನಗಳ್ಲಿ 55 ಸ್ಥಾನಗಳನ್ನು ಗೆಲ್ಲವ ನಿಟ್ಟಿನಲ್ಲಿ ಬಿಜೆಪಿ ಕಾರ್ಯನಿರತವಾಗಿದೆ.