Untitled Document
Sign Up | Login    
Dynamic website and Portals
  
October 27, 2014

ಪ್ರತ್ಯೇಕವಾದಿಗಳಿಂದ ಕಾಶ್ಮೀರ ಬಂದ್ ಗೆ ಕರೆ: ಜನಜೀವನ ಅಸ್ತವ್ಯಸ್ಥ

ಶ್ರೀನಗರ : ಕಾಶ್ಮೀರ ಪ್ರತ್ಯೇಕವಾದಿಗಳು ಜಮ್ಮು-ಕಾಶ್ಮೀರ ಬಂದ್ ಗೆ ಕರೆ ನೀಡಿದ್ದರ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿ ಶ್ರೀನಗರದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಪೊಲೀಸ್ ಅಧಿಕಾರಿಗಳು ನಿರ್ಬಂಧ ಹೇರಿದ್ದರು.

1947ರ ಅ.27ರಂದು ಭಾರತದೊಂದಿಗೆ ಕಾಶ್ಮೀರವನ್ನು ವಿಲೀನಗೊಳಿಸಲಾಗಿತ್ತು. ವಿಲೀನ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರತ್ಯೇಕವಾದಿಗಳಾದ ಸಯ್ಯದ್ ಅಲಿ ಗಿಲಾನಿ, ಉಮರ್ ಫಾರೂಕ್, ಮಹಮ್ಮದ್ ಯಾಸಿನ್ ಮಲಿಕ್, ಕಾಶ್ಮೀರ ಬಂದ್ ಗೆ ಕರೆ ನೀಡಿದ್ದರು.

ಪ್ರತ್ಯೇಕವಾದಿಗಳು ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು, ರಾಜ್ಯದ 5 ಭಾಗಗಳಲ್ಲಿ ನಿರ್ಬಂಧ ಹೇರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವಿಲೀನ ದಿನಾಚರಣೆ ಅಂಗವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮಾಜಿ ಪ್ರಧಾನಮಂತ್ರಿ ಬ್ಯಾರಿಶ್ಟರ್ ಸುಲ್ತಾನ್ ಮಹಮದ್ ಚೌದರಿ ಅವರ ನಾಯಕತ್ವದಲ್ಲಿ ಲಂಡನ್ ನಲ್ಲಿಯೂ ರ್ಯಾಲಿ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited