ಪಾಟ್ನಾ : 'ಕಪ್ಪುಹಣ' ವಿಷಯದ ಬಗ್ಗೆ ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸ್ವಿಸ್ ಬ್ಯಾಂಕ್ ನಲ್ಲಿರುವ ಹಣವನ್ನು ವಾಪಸ್ ತರುವ ಸಂಬಂಧ ಎನ್.ಡಿ.ಎ ಸರ್ಕಾರ ಕೈಗೊಂಡಿರುವ ನಿರ್ಧಾರ ಅದರ ನಾಯಕರ ಮಾನಸಿಕತೆಯನ್ನು ತಿಳಿಸುತ್ತದೆ ಎಂದು ಹೇಳಿದ್ದಾರೆ.
ಅಧಿಕಾರಕ್ಕೆ ಬಂದು 5 ತಿಂಗಳಾದರೂ ಎನ್.ಡಿ.ಎ ಸರ್ಕಾರ ಕಪ್ಪುಹಣ ವಾಪಸ್ ತರಲು ಪರಿಣಾಮಕಾರಿಯಾದ ಕ್ರಮ ಕೈಗೊಂಡಿಲ್ಲ ಎಂದು ನಿತೀಶ್ ಕುಮಾರ್ ಫೇಸ್ ಬುಕ್ ನಲ್ಲಿ ಆರೋಪಿಸಿದ್ದಾರೆ.
ಕಪ್ಪುಹಣ ಹೊಂದಿರುವವರ ಬಗ್ಗೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರ ಮೂವರ ಹೆಸರನ್ನು ಮಾತ್ರ ಬಹಿರಂಗ ಪಡಿಸಿದೆ. ಹಾಗಾದರೆ ಇಡೀ ದೇಶದಲ್ಲಿ ಮೂವರ ಬಳಿ ಮಾತ್ರವೇ ಕಪ್ಪುಹಣ ಇದೆಯೇ ಎಂದು ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿಯನ್ನು ನಿತೀಶ್ ಕುಮಾರ್ ಭ್ರಷ್ಟಾಚಾರಿಗಳ ಪಕ್ಷ ಎಂದು ಆರೋಪಿಸಿದ್ದಾರೆ.